Saturday, 12th October 2024

ಸಾರಿಗೆ ನೌಕರರ ಮುಷ್ಕರ ಅಂತ್ಯ

ಬೆಂಗಳೂರು: ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಸಾರಿಗೆ ನೌಕರರು ಸೋಮವಾರ ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ಈ ಮೂಲಕ ಎಂದಿನಂತೆ ರಸ್ತೆಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ಸುಗಳು ಸಂಚಾರ ಆರಂಭಿಸಿವೆ.

ದಾವಣಗೆರೆ, ಕೊಪ್ಪಳ, ಚಿತ್ರದುರ್ಗ, ರಾಯಚೂರು, ತುಮಕೂರು ಹಾಗೂ ಇತರೆಡೆ ಹಂತಹಂತವಾಗಿ ಬಸ್‌ ಸಂಚಾರ ಆರಂಭ ಗೊಂಡಿದ್ದು, ಉತ್ತರ ಕರ್ನಾಟಕದಲ್ಲಿ ಮುಖ್ಯವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಬಸ್ ಸಂಚಾರ ಯಾವುದೇ ಅಡೆತಡೆಯಿಲ್ಲದೆ ಆರಂಭವಾಗಿದೆ.

ಬಸ್‌ ಸಂಚಾರ ಆರಂಭವಾದ ಬೆನ್ನಲ್ಲೇ, ದಿನನಿತ್ಯ ಸಂಚಾರಕ್ಕೆ ಸಾರಿಗೆಯನ್ನೇ ನಂಬಿಕೊಂಡಿರುವ ಜನಸಾಮಾನ್ಯರು ಆಯಾ ಬಸ್‌ ನಿಲ್ದಾಣಗಳಲ್ಲಿ ಜಮಾವಣೆಯಾಗುತ್ತಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಅಂತ್ಯ ಕುರಿತಂತೆ, ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ.