ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರು ಇನ್ನೂ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಸೆ.20 ರಿಂದ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
2021 ರ ಏಪ್ರಿಲ್ ನಲ್ಲಿ ನಡೆದ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕ ರನ್ನು ಕೆಲಸಕ್ಕೆ ಪುನರ್ ನೇಮಿಸಬೇಕು. ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡಿರುವ ನೌಕರ ರನ್ನು ತೆರವು ಮಾಡಬೇಕು. ಮುಷ್ಕರದ ಅವಧಿಯಲ್ಲಿ ಕಾರ್ಮಿಕರಿಗೆ ನೀಡಲಾಗಿರುವ ಅಪಾದನಾ ಪತ್ರವನ್ನು ರದ್ದು ಪಡಿಸುವ ಕುರಿತಂತೆ ಹಲವು ಬೇಡಿಕೆಗಳನ್ನು ಈಡೇರಿಕೆಗಾಗಿ ಸೆ.20 ರಂದು ಸಾರಿಗೆ ನೌಕರರ ಧರಣಿ ನಡೆಯಲಿದೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲು ನಿರ್ಧರಿಸ ಲಾಗಿದ್ದು, ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಧರಣಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಸೋಮವಾರ ಬಸ್ ಸಂಚಾರ ದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.