Thursday, 5th December 2024

BY Vijayendra: ಒಂದು ಕೋಮು, ಒಂದು ಧರ್ಮಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರಾ ಎಂದ ವಿಜಯೇಂದ್ರ

BY Vijayendra

ಕಲಬುರಗಿ: ವಕ್ಫ್ ಕಾರಣಕ್ಕೆ ರೈತರಿಗೆ, ಮಠಮಾನ್ಯಗಳಿಗೆ ಅನ್ಯಾಯ ಆಗಬಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಜೀ (PM Narendra Modi) ಅವರು ಜಂಟಿ ಸಂಸದೀಯ ಸಮಿತಿ ರಚಿಸಿದ್ದಾರೆ. ಆ ಸಮಿತಿಯು ದೇಶಾದ್ಯಂತ ಪ್ರವಾಸ ಮಾಡಿದೆ. ವಕ್ಫ್ ಕಾಯಿದೆ ತಿದ್ದುಪಡಿಗೆ ಪ್ರಧಾನಿಯವರು ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದರು. ಕಲಬುರಗಿಯಲ್ಲಿ ಇಂದು ವಕ್ಫ್ ಸಂಬಂಧಿತ ಹೋರಾಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾ ಪ್ರವಾಸ ಮಾಡಿ ಜಿಲ್ಲಾಧಿಕಾರಿಗಳನ್ನು ಕಟ್ಟಿಹಾಕಿ ಸಿಎಂ ಆದೇಶವನ್ನು ತಿಳಿಸಿ, ವಕ್ಫ್ ಮೂಲಕ ಜಮೀನು ಕಿತ್ತುಕೊಳ್ಳಲು ಸೂಚಿಸಿದ್ದಾರೆ ಎಂದು ಆರೋಪಿಸಿದ ಅವರು, ಸಿದ್ದರಾಮಯ್ಯನವರು ಒಂದು ಕೋಮು, ಒಂದು ಧರ್ಮಕ್ಕೆ ಮುಖ್ಯಮಂತ್ರಿ ಆಗಿದ್ದಾರಾ ಅಥವಾ ನಾಡಿನ ಆರೂವರೆ ಕೋಟಿ ಜನರಿಗೆ ಸಿಎಂ ಆಗಿದ್ದಾರಾ ಎಂಬ ಅನುಮಾನ ಬರುವಂತಾಗಿದೆ ಎಂದು ಅವರು ದೂರಿದರು.

ಈ ಸುದ್ದಿಯನ್ನೂ ಓದಿ | Pralhad Joshi: ‘ಪಿಎಂ ಸೂರ್ಯ ಘರ್ʼ ಯೋಜನೆ; ಶೂನ್ಯ ಬಂಡವಾಳದಲ್ಲಿ ಜನರೇ ವಿದ್ಯುತ್ ಉತ್ಪಾದಕರಾಗಬಹುದು!

ಯಾಕೆ ಪುಣ್ಯಾತ್ಮ ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಅಷ್ಟೊಂದು ದ್ವೇಷ ಎಂದು ನನಗೆ ಅರ್ಥವಾಗುತ್ತಿಲ್ಲ. ಯಾಕೆ ಹಿಂದೂಗಳ ಬಗ್ಗೆ ಅವರಿಗೆ ಅಷ್ಟೊಂದು ಆಕ್ರೋಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ |Home loan: ಮಹಿಳೆಯರಿಗೆ‌ ಮಾತ್ರ ಸಿಗೋ ಗೃಹ ಸಾಲ ಲಾಭಗಳ ಲಿಸ್ಟ್!

ಈ ವೇಳೆ ಮಾಜಿ ಸಚಿವರಾದ ಬಿ.ಶ್ರೀರಾಮುಲು, ರೇಣುಕಾಚಾರ್ಯ, ಬೈರತಿ ಬಸವರಾಜ್, ಮುರುಗೇಶ್ ನಿರಾಣಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಉಪ ನಾಯಕ ಸುನೀಲ್ ವಲ್ಯಾಪುರೆ, ಶಾಸಕರಾದ ಬಸವರಾಜ ಮತ್ತಿಮೊಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ. ಪಾಟೀಲ, ಪ್ರಮುಖರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ್ ಪಾಟೀಲ ತೇಲ್ಕೂರ, ಸುಭಾಷ್ ಪಾಟೀಲ ಗುತ್ತೇದಾರ, ಅಮರನಾಥ ಪಾಟೀಲ, ಬಾಬುರಾವ್ ಚೌಹಾಣ್, ಶರಣು ತಳ್ಳಿಕೇರಿ, ಸಿದ್ದು ಪಾಟೀಲ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಗ್ರಾಮೀಣ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಿ, ರೈತ ಮೋರ್ಚಾದ ಮುಖಂಡ ರುದ್ರೇಶ್ ಮತ್ತಿತರ ಪ್ರಮುಖರು ಇದ್ದರು.