ಹಾನಗಲ್ : ರಾಜ್ಯದ ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಂಗೇರಿದೆ. ಬಿಜೆಪಿಯಿಂದ ಉಪ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.
ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಸೇರಿ ಹಾನಗಲ್ ಪಟ್ಟಣದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆಯ ಮುಖ್ಯಾಂಶಗಳು ಇಂತಿವೆ.
- ಹಾನಗಲ್ ಪಟ್ಟಣದ ಹೊರವಲಯದಲ್ಲಿ ಬಸ್ ತಂಗುದಾಣ ಮತ್ತು ಟ್ರಕ್ ಟರ್ಮಿನಲ್ ಗಳನ್ನು ನಿರ್ಮಿಸಲಾ ಗುವುದು
- ಪಟ್ಟಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ಹಾಗೂ ಸಂಪರ್ಕ ರಸ್ತೆಗಳಲ್ಲಿ ಬಸ್ ಚರ್ಟರ್ ಗಳನ್ನು ನಿರ್ಮಾಣ ಮಾಡಲಾಗುವುದು
- ಜನೌಷಧಿ ಮಳಿಗೆಗಳಲ್ಲಿ ಎಲ್ಲ ಬಗೆಯ ಔಷಧಗಳ ಲಭ್ಯತೆ ಮತ್ತು ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗುವುದು ಬೇಡಿಕೆಗೆ ಅನುಗುಣವಾಗಿ ಹೊಸ ಔಷಧಿಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು
- ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ರಕ್ಷಣೆ ದೃಷ್ಟಿಯಿಂದ ಪಟ್ಟಣದಾದ್ಯಂತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ವಿಶೇಷ ಕಣ್ಗಾವಲು ವ್ಯವಸ್ಥೆ ಮತ್ತು ಪೊಲೀಸ್ ಗಸ್ತು ಜಾರಿಗೊಳಿಸಲಾಗುವುದು
- ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹಾನಗಲ್ ಪಟ್ಟಣದಲ್ಲಿ ಪ್ರಮುಖ ಹಾಗೂ ಸಂಚಾರಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ ಪಾದಚಾರಿಗಳಿಗೂ ಅನುಕೂಲವಾಗುವಂತೆ ಅತ್ಯಾಧುನಿಕ ಮಾದರಿಯಲ್ಲಿ ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುವುದು
- ಸಾರ್ವಜನಿಕ ಬೇಡಿಕೆಗೆ ಅನುಗುಣವಾಗಿ ಪಟ್ಟಣದ ವಿವಿಧೆಡೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು
- ಹಾನಗಲ್ ಪಟ್ಟಣದಲ್ಲಿ ನಿರ್ಮಿಸುವ ಎಲ್ಲ ವಸತಿ ಮತ್ತು ವಾಣಿಜ್ಯ ಕಟ್ಟಡಗಳಲ್ಲಿ ಜಾರಿಯಲ್ಲಿರುವ ಕಾನೂನಿನ ಅನ್ವಯ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಅಂತರ್ಜಲ ಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು
- ಹಾನಗಲ್ ಪಟ್ಟಣದ ಎಲ್ಲ ಕುಟುಂಬದವರಿಗೆ ಆರೋಗ್ಯ ಇಲಾಖೆಯ ವತಿಯಿಂದ 5ಲಕ್ಷ ರೂ ಆರೋಗ್ಯ ವಿಮೆ ಸೌಲಭ್ಯ ದೊರಕಿಸುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ತೋರಿಸಿ ವಿತರಿಸಲಾಗುವುದು
- ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಸ್ವಂತ ಉದ್ದಿಮೆ ಸ್ಥಾಪಿಸಲು ಮತ್ತು ಇತರೆಡೆ ಉದ್ಯೋಗ ದೊರಕಿಸಲು ನೆರವು ನೀಡಲಾಗುವುದು ಪ್ರತಿವರ್ಷ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು
- ಹಾನಗಲ್ ಪಟ್ಟಣದ ವಿವಿಧೆಡೆ ಸುಂದರ ಉದ್ಯಾನವನಗಳನ್ನು ನಿರ್ಮಿಸಿ ಅದರಲ್ಲಿ ವಾಯುವಿಹಾರ ಪತ್ರ ಮಕ್ಕಳ ಆಟಕ್ಕಾಗಿ ಮತ್ತು ಯುವಕರ ವ್ಯಾಯಾಮಕ್ಕಾಗಿ ಉಪಕರಣಗಳನ್ನು ಅಳವಡಿಸಲಾಗುವುದು