Sunday, 15th December 2024

ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಅವರು ಎಲ್ಲಿ ನಿಂತರೂ ಗೆದ್ದು ಬರ್ತಾರೆ. ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದಿಂದ ಒಳ್ಳೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು.

ಯಡಿಯೂರಪ್ಪ ಮತ್ತು ಕುಟುಂಬವನ್ನು ಬಿಜೆಪಿ ಪಕ್ಕಕ್ಕೆ ಸರಿಸಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಯಡಿ ಯೂರಪ್ಪ ಅವರು, ಸಿದ್ದರಾಮಯ್ಯರಿಂದ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ. ಬಿಜೆಪಿ ನನಗೆ ಕೊಟ್ಟಿರುವ ಸ್ಥಾನಮಾನ ಬೇರೆ ಯಾರಿಗೂ ಸಿಕ್ಕಿಲ್ಲ. ನಾನು 4 ಬಾರಿ ಸಿಎಂ ಆಗಿದ್ದೆ. ಎಲ್ಲಾ ಅವಕಾಶ ಸಿಕ್ಕಿದೆ . ಸಿಎಂ ಸ್ಥಾನಕ್ಕೆ ನಾನೇ ರಾಜೀನಾಮೆ ಕೊಟ್ಟು ಬಂದಿದ್ದೇನೆ ಎಂದು ಹೇಳಿದ್ದಾರೆ.