Saturday, 14th December 2024

ಸುರಕ್ಷತಾ ಕ್ರಮಗಳೊಂದಿಗೆ ತಪ್ಪದೇ ಮತ ಚಲಾಯಿಸಿ: ಸಿಎಂ ಯಡಿಯೂರಪ್ಪ ಮನವಿ

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಶುರು ವಾಗಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಎಲ್ಲರೂ ತಪ್ಪದೇ ಮತ ಚಲಾಯಿಸಿ ಎಂದು ಮತದಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ, ಮಂಗಳವಾರ ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದು ರಾಜ್ಯದಲ್ಲಿ ನಡೆಯುತ್ತಿರುವ ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಕೋರುತ್ತೇನೆ.