Sunday, 15th December 2024

Caste census: ರಾಜಕೀಯಕ್ಕೆ ಜಾತಿಗಣತಿಯನ್ನು ದಾಳವಾಗಿ ಬಳಸಿಕೊಳ್ಳಬೇಡಿ: ಆರ್. ಅಶೋಕ್ ಕಿಡಿ

R Ashok

ಬೆಂಗಳೂರು: ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು (Caste census) ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನು ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ ‘ಅಂತ್ಯೋದಯ’ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಕ್ರಮಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಹೇಳಿರುವ ಅವರು, ಸಿಎಂ ಸಿದ್ದರಾಮಯ್ಯ ನವರ ‘ಆತ್ಮಸಾಕ್ಷಿ’ಗೆ ಕೆಲವು ಪ್ರಶ್ನೆಗಳು ಕೇಳಿದ್ದಾರೆ.

1) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

3) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನು ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪನವರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದು 17 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿ ಸ್ವೀಕರಿಸಲು ಮುಂದಾಗಿರುವುದು ಯಾವ ಕಾರಣಕ್ಕೆ?

4) ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

5) ಜಾತಿಗಣತಿಯನ್ನು ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

ಈ ಸುದ್ದಿಯನ್ನೂ ಓದಿ | Election Result 2024: ಬಿಜೆಪಿಯಿಂದ ಚುನಾವಣಾ ಆಯೋಗದ ಮೇಲೆ ಒತ್ತಡ? ಕಾಂಗ್ರೆಸ್‌ ನಾಯಕರಿಂದ ಅನುಮಾನ

ಅಕ್ಟೋಬರ್ 18ರಂದು ನಡೆಯುವ ಸಂಪುಟ ಸಭೆಗೂ ಮುನ್ನ ಮಾನ್ಯ ಮುಖ್ಯಮಂತ್ರಿಗಳ ‘ಆತ್ಮಸಾಕ್ಷಿ’ ಈ ಪ್ರಶೆಗಳನ್ನು ಆತ್ಮಾವಲೋಕನ ಮಾಡಿ ಉತ್ತರ ನೀಡುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು