ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ವಿರುದ್ಧ ದಾಖಲಿಸಲಾಗದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದೆ. ಈ ಕುರಿತು ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಸರಕಾರ ಹಿಂದೆಗೆದುಕೊಂಡಿತ್ತು.
ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ, ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಹಿನ್ನೆಲೆ
ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ನಂತರ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು.
ಇದನ್ನೂ ಓದಿ: HD Kumaraswamy: ಐಪಿಎಸ್ ಅಧಿಕಾರಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; ಎಚ್ಡಿ ಕುಮಾರಸ್ವಾಮಿ ಕಿಡಿ