Friday, 22nd November 2024

ಸಾಮಾನ್ಯ ಪ್ರವೇಶ ಪರೀಕ್ಷೆ ಇಂದು ಆರಂಭ

ಬೆಂಗಳೂರು: ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಗುರುವಾರ ರಾಜ್ಯಾದ್ಯಂತ ಆರಂಭವಾಯಿತು.

ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ ಕರ್ನಾಟಕ ಪರೀಕ್ಷಾ ಪ್ರಾಕಾರ ಪರೀಕ್ಷೆ ನಡೆಸುತ್ತಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ತಲುಪಿದ್ದು, ಸುಸೂತ್ರವಾಗಿ ಪರೀಕ್ಷೆ ಆರಂಭವಾಗಿದೆ. ಈ ತನಕ ಯಾವುದೇ ಗೊಂದಲ ಉಂಟಾಗಿಲ್ಲ ಎಂದು ಕೆಇಎ ಮೂಲಗಳು ತಿಳಿಸಿವೆ.

ಕೊನೆಗಳಿಗೆವರೆಗೂ ಕೆಲವೊಂದು ವಿದ್ಯಾರ್ಥಿಗಳು ಪ್ರವೇಶಪತ್ರ ಡೌನ್‍ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಎಂದು ಮೂಲಗಳು ಹೇಳಿವೆ. ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆದಿವೆ.

ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ.

ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.ಕರ್ನಾಟಕ ಪರೀಕ್ಷಾ ಪ್ರಾಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.

ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.