ಚನ್ನಪಟ್ಟಣ: ಮುಂದೊಂದು ದಿನ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ. ಆಗ ರಾಮನಗರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಚನ್ನಪಟ್ಟಣ ಕ್ಷೇತ್ರದ (Channapatna By Election) ವಿಠ್ಠಲೇನಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು.
ಈ ಸುದ್ದಿಯನ್ನೂ ಓದಿ | HD Kumaraswamy: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಮೋದಿ ಒತ್ತು; ಕುಮಾರಸ್ವಾಮಿ ಶ್ಲಾಘನೆ
ಈ ಸರ್ಕಾರದ ಆಡಳಿತದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಈ ಭೂಮಿಗಳನ್ನು ಲೂಟಿ ಹೊಡೆಯುವುದಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸೇರಿಸುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ನಾವೆಲ್ಲಾ ಈ ನೆಲದ ಮಕ್ಕಳು, ಮಣ್ಣು ನಂಬಿಕೊಂಡು ಜೀವನ ಮಾಡುವವರು. ಮಣ್ಣು ಮಾರಿಕೊಂಡು ಬದುಕುವ ಜನ ನಾವಲ್ಲ ಎಂದು ತಿಳಿಸಿದರು.
ಚನ್ನಪಟ್ಟಣ ಹಾಗೂ ರಾಮನಗರಗಳನ್ನು ಅವಳಿ ನಗರಗಳನ್ನಾಗಿ ಹುಬ್ಬಳ್ಳಿ – ಧಾರವಾಡದಂತೆ ಅಭಿವೃದ್ಧಿ ಮಾಡಲಾಗುವುದು. ಚನ್ನಪಟ್ಟಣ ಮಾದರಿ ವಿಧಾನಸಭೆ ಕ್ಷೇತ್ರವನ್ನಾಗಿ ರೂಪಿಸಿ ಶೈಕ್ಷಣಿಕ, ಆರ್ಥಿಕ ಹಾಗೂ ಕೈಗಾರಿಕಾ ಹಬ್ ಅನ್ನಾಗಿ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಈ ಸುದ್ದಿಯನ್ನೂ ಓದಿ | Channapatna By Election: ಚನ್ನಪಟ್ಟಣದಲ್ಲಿ ಮನೆ ಮನೆಗೂ ತೆರಳಿ ಮತಯಾಚಿಸಿದ ಕುಮಾರಸ್ವಾಮಿ, ಬಾಲಕಿ ಜತೆ ಆತ್ಮೀಯ ಮಾತುಕತೆ!
ವಿಠ್ಠಲೇನಹಳ್ಳಿ ಮತ್ತು ದೇವೇಗೌಡರ ಬಾಂಧವ್ಯ ಸ್ಮರಿಸಿದ ಸಚಿವರು
ವಿಠ್ಠಲೇನಹಳ್ಳಿ ಗ್ರಾಮದ ಜತೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಹೊಂದಿರುವ ಬಾಂಧವ್ಯವನ್ನು ಸ್ಮರಿಸಿದ ಕುಮಾರಸ್ವಾಮಿ ಅವರು, ವಿಶೇಷವಾಗಿ ಗ್ರಾಮಸ್ಥರಿಗೆ ಅಭಿವಂದನೆ ಸಲ್ಲಿಸಿದರು. ಅಲ್ಲದೆ, ಈ ಗ್ರಾಮದಿಂದ ದೇವೆಗೌಡರು ಬೆಂಗಳೂರುವರೆಗೂ ನಡೆಸಿದ ಪಾದಯಾತ್ರೆಯನ್ನು ನೆನಪು ಮಾಡಿಕೊಂಡರು.