Thursday, 12th December 2024

ನ.೧೪ರಂದು ಕಿತ್ತೂರು ರಾಣಿ ಚೆನ್ನಮ್ಮನವರ 244ನೇ ಜಯಂತೋತ್ಸವ

ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದ ಪಕ್ಕದಲ್ಲಿ ನ.೧೪ರ ಸೋಮವಾರ ರಂದು ಗಡಿನಾಡು ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಹಕ್ಕುತ್ತಾಯ ಹಾಗೂ ರಾಷ್ಟ್ರಮಾತೆ ಕಿತ್ತೂರು ರಾಣಿ ಚೆನ್ನಮ್ಮನವರ 244ನೇ ಜಯಂತೋತ್ಸವ ಮತ್ತು 199ನೇ ವಿಜಯೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾ ಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಹಿಸಲಿದ್ದು, ಉದ್ಘಾಟನೆ ಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವೇರಿಸಲಿದ್ದಾರೆ.

ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೆರವೇರಿಸಲಿದ್ದು, ಕಾರ್ಯಕ್ರಮದ ಜ್ಯೋತಿಯನ್ನು ಮಾಜಿ ಶಾಸಕರುಗಳಾದ ಡಾ.ಸಾರ್ವಭೌಮ ಬಗಲಿ ರವಿಕಾಂತ ಪಾಟೀಲ, ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ ಶ್ರೀಶೈಲ್‌ಗೌಡ ಬಿರಾದಾರ ಎಸ್.ಎ. ಪಾಟೀಲ ಡೋಮನಾಳ, ಭೀಮನಗೌಡ ದಾದಾಗೌಡ ಪಾಟೀಲ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಎಚ್. ಬಿರಾದಾರ್ ಬೆಳಗಲಿದ್ದಾರೆ.

ರೈಲು ನಿಲ್ದಾಣ ರಸ್ತೆಯಲ್ಲಿರುವ ಶಿವಾಜಿ ವ್ರತ್ತದಿಂದ ಚೆನ್ನಮ್ಮನವರ ಭಾವಚಿತ್ರದ ಮೆರವಣಿಗೆಯನ್ನು ಸಕಲ ವಾದ್ಯ ವೈಭವ ಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮುಖಾಂತರ ಹಾದು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಲಿದೆ.

ಕಾರ್ಯಕ್ರಮಕ್ಕೆ ಸಮಸ್ತ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಹೆಚ್ ಬಿರಾದಾರ್ ಹಾಗೂ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸೋಮಶೇಖರ್ ದೇವರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.