Monday, 13th January 2025

Child death: ಮಂಗಳೂರಿನಲ್ಲಿ ದಾರುಣ ಘಟನೆ, ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು

Child death

ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ದಾರುಣ ಘಟನೆ ಮಂಗಳೂರಿನಲ್ಲಿ (Mangaluru News) ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ.

ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ ಮಗುವಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿತು. ನಿನ್ನೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ.

Bomb Hoax: ರಾಮೇಶ್ವರಂ ಕೆಫೆಯಂತೆ ಮತ್ತೊಂದು ಬಾಂಬ್ ಸ್ಪೋಟದ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ವರ್ಷ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ ವಿವಿಧೆಡೆ ಬಾಂಬ್‌ ಸ್ಫೋಟ (Bomb Hoax) ನಡೆಸುವುದಾಗಿ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಜನವರಿ 26ರಂದು ದೇಶದೆಲ್ಲೆಡೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತನ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಪಚಿತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ ಸ್ಫೋಟವಾಗಲಿದೆ ಎಂದು ಬೆಂಗಳೂರು ಪೊಲೀಸ್ ಕಂಟ್ರೋಲ್ ರೂಮ್‌ಗೆ ಅಪರಿಚಿತನೊಬ್ಬ ಕರೆ ಮಾಡಿದ್ದಾನೆ. ಜನವರಿ 9ರಂದು ಸಂಜೆ 5:30ರ ಸುಮಾರಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೊಲ್ ರೂಮ್‌ಗೆ ಕರೆ ಮಾಡಿದ್ದ ಅಪರಿಚಿತ, 6 ಜನರ ಹೆಸರು ಹಾಗೂ ವಿಳಾಸಗಳನ್ನು ತಿಳಿಸಿ ರಾಮೇಶ್ವರಂ ಕೆಫೆಯಲ್ಲಿ ಈ ಹಿಂದೆ ಬಾಂಬ್ ಸ್ಫೋಟವಾದಂತೆ ಆರು ಜನರು ಗಣರಾಜ್ಯೋತ್ಸವದ ದಿನ ನಗರದ ವಿವಿಧೆಡೆ ಬಾಂಬ್ ಸ್ಫೋಟಿಸಲು ಉದ್ದೇಶಿಸಿದ್ದಾರೆ ಎಂದು ಹೇಳಿದ್ದಾನೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂದು ಕಂಡುಬಂದಿದ್ದು, ಪೊಲೀಸ್ ಕಂಟ್ರೋಲ್ ರೂಮ್ ಪಿಎಸ್ಐ ಓರ್ವರು ನೀಡಿರುವ ದೂರಿನನ್ವಯ ಅಪರಿಚಿತನ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದನ್ನೂ ಓದಿ: Cylinder Blast: ಬೆಂಗಳೂರಿನಲ್ಲಿ ಸಿಲಿಂಡರ್‌ ಸ್ಫೋಟ, 7 ಮಂದಿಗೆ ಗಂಭೀರ ಗಾಯ

Leave a Reply

Your email address will not be published. Required fields are marked *