Friday, 3rd January 2025

Child Death: ಅಂಗನವಾಡಿಯಲ್ಲಿ ಹಾವು ಕಚ್ಚಿ 4 ವರ್ಷದ ಬಾಲಕಿ ಸಾವು

child death

ಕಾರವಾರ: ಅಂಗನವಾಡಿಯಲ್ಲಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಹಾವು ಕಚ್ಚಿ (Snkae bite) 4 ವರ್ಷದ ಬಾಲಕಿ ಸಾವನ್ನಪ್ಪಿರುವ (child death) ಘಟನೆ ಉತ್ತರ ಕನ್ನಡ (Uttara Kannada news) ಜಿಲ್ಲೆಯ ಮುಂಡಗೋಡ ಮಾರಿಕಾಂಬಾ ನಗರದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ನಿನ್ನೆ ಬೆಳಗ್ಗೆ 10.30 ರ ಸುಮಾರಿಗೆ ಹೊರಗೆ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುವ ಮಾರ್ಗದಲ್ಲಿ ಮಗುವಿನ ಕಾಲಿಗೆ ಹಾವು ಕಚ್ಚಿದೆ. ನಂತರ ಮಗುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್‌ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯವೇ ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಾಗಿ ಬಾಂಗ್ಲಾದೇಶದ ಪ್ರಜೆಗೆ ಶಿಕ್ಷೆ

ಬೆಂಗಳೂರು: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ ಶಿಕ್ಷೆಯಾಗಿದೆ.

ಎನ್ ಐಎ ಕೋಲ್ಕತ್ತಾ ಶಾಖೆಯು ಬುರ್ದ್ವಾನ್ ಸ್ಫೋಟ ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದ ಸಂದರ್ಭದಲ್ಲಿ ದೊರೆತ ಮಾಹಿತಿ ಆಧಾರದ ಮೇಲೆ ಜೂನ್ 2019 ರಲ್ಲಿ ಬೆಂಗಳೂರು ನಗರ ಪೊಲೀಸರು ಆರಂಭಿಕವಾಗಿ ಪ್ರಕರಣ ದಾಖಲಿಸಿದ್ದರು. ಬಳಿಕ ಎನ್ ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಬಾಂಗ್ಲಾದೇಶದಲ್ಲಿ 2005ರಲ್ಲಿ ಸಂಭವಿಸಿದ ಸರಣಿ ಸ್ಫೋಟಕ್ಕೆ ಸಂಬಂಧಿಸಿದ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು 2014 ರಲ್ಲಿ JMB ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜೊತೆಗೆ ಪರಾರಿಯಾಗಿದ್ದ ಜಹೀದುಲ್ ಇಸ್ಲಾಂ ಭಾರತ ಪ್ರವೇಶಿಸಿದ್ದ ಎಂದು ಎನ್ ಐಎ ತನಿಖೆಯಲ್ಲಿ ತಿಳಿದುಬಂದಿತ್ತು.