Friday, 13th December 2024

ಸಿ.ಎಂ.ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಿ.ಎಂ.ಉದಾಸಿಯವರು  ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮ ವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗ ದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.  ಅವರ ನಿಧನದಿಂದ  ಅಪರೂಪದ ನೇತಾರರೊಬ್ಬ ರನ್ನು  ನಾಡು ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.  ಭಗವಂತ ಅವರ  ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.