Monday, 9th December 2024

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2000 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು  ಕಾರಣೀಭೂತ ರಾಗಿದ್ದಾರೆ ಎಂದು ಸ್ಮರಿಸಿದ್ದಾರೆ.

ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಭಿಮಾನಿ ಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.