Saturday, 14th December 2024

ರಾಜ್ಯಪಾಲ ವಿ.ಆರ್.ವಾಲಾರಿಗೆ ಹೊಸ ವರ್ಷಾಚರಣೆ ಶುಭ ಕೋರಿದ ಸಿಎಂ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾಗಿ ಶುಭ ಕೋರಿದರು.

ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಹೂಗುಚ್ಛ ನೀಡಿ ನೂತನ ವರ್ಷಕ್ಕೆ ಶುಭಾಷಯಗಳನ್ನು ತಿಳಿಸಿದರು. ಇದಕ್ಕೆ ಪ್ರತಿಯಾಗಿ ರಾಜ್ಯಪಾಲರು ಕೂಡ ಸಿಎಂಗೆ ಶುಭಾಶಯ ಹೇಳಿದರು.

ನಂತರ ಕೃಷ್ಣಾದಲ್ಲಿ ಅಧಿಕಾರಿ ವರ್ಗದವರು ಬಿಎಸ್‍ವೈ ಅವರಿಗೆ ನೂತನ ವರ್ಷದ ಶುಭ ಕೋರಿದರು. ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗೆ ಹೂಗುಚ್ಛ ನೀಡಿ ಹೊಸ ವರ್ಷದ ಶುಭ ಕೋರಿದರು.

ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿಯವರು, ಜನಪರ ಆಡಳಿತ ನೀಡಬೇಕು. ಜನಪರವಾಗಿ ಕೆಲಸ ಮಾಡಿ. ನಿಮ್ಮ ಬೇಡಿಕೆ ಏನೇ ಇದ್ದರೂ ಸರ್ಕಾರ ಈಡೇರಿಸಲು ಸಿದ್ದವಿದೆ. ಸರ್ಕಾರಕ್ಕೆ ಹೆಸರು ತರುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದರೆ ನಿಮಗೆ ಸದಾ ನಮ್ಮ ಬೆಂಬಲ ಇರುತ್ತದೆ ಎಂದು ಅಭಯ ನೀಡಿದರು.