Wednesday, 11th December 2024

ಶಾಲಾ-ಕಾಲೇಜು ಆರಂಭ ಕುರಿತಂತೆ ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್  ನೀಡಿರುವ ಕಾರಣ, ಶನಿವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ.

ಈಗಾಗಲೇ ತಾಂತ್ರಿಕ ಶಿಕ್ಷಣ ಸಮಿತಿ ಹಾಗೂ ಆರೋಗ್ಯ ಇಲಾಖೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ತನ್ನ ವರದಿ ಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಎರಡು ಸಮಿತಿಗಳು ಶಾಲಾ-ಕಾಲೇಜು ಜನವರಿಯಿಂದ ಕೋವಿಡ್-19 ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪುನರಾರಂಭಿಸಲು ಅನುಮತಿಸಿವೆ. ಈ ಹಿನ್ನಲೆಯಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ಹಂತದ ಅಧಿಕಾರಿಗಳ ಜೊತೆಗೆ ಸಭೆ ನಡೆಯಲಿದೆ.

ಇಂತಹ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ತಾಂತ್ರಿಕ ಸಮಿತಿ, ಆರೋಗ್ಯ ಇಲಾಖೆಯ ಮುಖ್ಯಸ್ಥರು ಸೇರಿದಂತೆ ವಿವಿಧ ಅಧಿಕಾರಿಗಳು ಭಾಗವಹಿಸಲಿದ್ದಾರೆ.