Monday, 23rd December 2024

CM Siddaramaiah: ವಿವಿಧ ಕೈಗಾರಿಕಾ ವಲಯಗಳಲ್ಲಿ 9,823 ಕೋಟಿ ರೂ. ಮೊತ್ತದ 9 ಪ್ರಸ್ತಾವನೆಗಳಿಗೆ ಅನುಮೋದನೆ

CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 9 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಸೆಮಿಕಂಡಕ್ಟರ್‌ ವಲಯದಲ್ಲಿ 3425 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ

ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಅನುಮೋದನೆ ನೀಡಲಾಯಿತು.

ಈ ಸುದ್ದಿಯನ್ನೂ ಓದಿ | Stock Market: ಚೇತರಿಸಿಕೊಂಡ ಷೇರುಪೇಟೆ- ಸೆನ್ಸೆಕ್ಸ್‌ನಲ್ಲಿ 507.18 ಅಂಕ ಜಂಪ್‌

ರೈತರಿಗೂ ಲಾಭಾಂಶದಲ್ಲಿ ಪಾಲು

ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ನಿಗದಿತ ಅವಧಿಯಲ್ಲಿ ಕೈಗಾರಿಕೆ ಆರಂಭಿಸದಿದ್ದರೆ ಸೂಕ್ತ ಕ್ರಮ

ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನೂ ಓದಿ | DHL QR CODE: ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡೋ ಮುನ್ನ ಎಚ್ಚರ…ಎಚ್ಚರ…! ಸ್ವಲ್ಪ ಯಾಮಾರಿದ್ರೂ ನಿಮ್ಮ ಹಣ ಮಂಗಮಾಯ

ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಿಕೊಳ್ಳಿ ಎಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.