ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಘೋಷಿಸಿದರು. ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ ‘Lovely But lonely’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.
ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ
ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ ಎಂದು ಸಿಎಂ ತಿಳಿಸಿದರು.
ಪಿ. ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.
ಈ ಸುದ್ದಿಯನ್ನೂ ಓದಿ | Delhi Assembly Election 2025: ದಿಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ; ಫೆ. 5ರಂದು ಒಂದೇ ಹಂತದಲ್ಲಿ ಮತದಾನ
ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್, ಹಿರಿಯ ಪತ್ರಕರ್ತ ಸಮೀವುಲ್ಲಾ, ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕ ಸದಾಶಿವ ಶೆಣೈ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಉಪಸ್ಥಿತರಿದ್ದರು.