Thursday, 19th December 2024

CM Siddaramaiah: ಅವಾಚ್ಯ ಪದ ಬಳಸಿದ ಸಿ.ಟಿ. ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌‌ ದೂರು; ಸೂಕ್ತ ಕ್ರಮ ಎಂದ ಸಿಎಂ

CM Siddaramaiah

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ (CT Ravi) ಅವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.

ಸುವರ್ಣ ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಸಿಟಿ ರವಿಯವರು ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲʼ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ; ಡಿ.ಕೆ. ಶಿವಕುಮಾರ್ ಟೀಕೆ

ʼಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.