ತುಮಕೂರು: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ (International Cricket Stadium) ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಹೇಳಿದರು. ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ತಿಳಿಸಿದರು.
ಮೈಸೂರಿನಲ್ಲೂ ಜಾಗ ಕೊಡ್ತೀವಿ
ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದು ಸಿಎಂ ಹೇಳಿದರು.
ಈ ಸುದ್ದಿಯನ್ನೂ ಓದಿ | KKRTC Jobs: ಎಸ್ಎಸ್ಎಲ್ಸಿ ಪಾಸಾದವರಿಗೆ ಕೆಎಸ್ಆರ್ಟಿಸಿ ಉದ್ಯೋಗ, ಶೀಘ್ರವೇ ಅರ್ಜಿ ಸಲ್ಲಿಸಿ
ಈ ಸಂದರ್ಭದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಗೂ ಜಿಲ್ಲೆಯ ಶಾಸಕರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ರಘುರಾಮ್ ಭಟ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.