ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಯೋಧರಲ್ಲಿ ಮೂವರು ಕರ್ನಾಟಕದ ಯೋಧರು (Soldiers death) ಮೃತಪಟ್ಟಿದ್ದು, ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಂತಿಮ ಗೌರವ ಸಲ್ಲಿಸಿದರು.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮೃತ ಯೋಧರಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ, ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ಮೂವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದೆ.
— Siddaramaiah (@siddaramaiah) December 26, 2024
ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ… pic.twitter.com/erterWW6Gu
ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ಮೂರು ಮಂದಿ ಕರ್ನಾಟಕದ ಯೋಧರು ಕಾಶ್ಮೀರದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಯಾನಂದ ತಿರುಕಣ್ಣನವರ್ ಬೆಳಗಾವಿ, ಮಹೇಶ್ ನಾಗಪ್ಪ ಬಾಗಲಕೋಟೆ, ಅನೂಪ್ ಪೂಜಾರಿ ಕುಂದಾಪುರ ಮೃತಪಟ್ಟ ಯೋಧರು. ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಂದಕಕ್ಕೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಭಯೋತ್ಪಾದಕ ಕೃತ್ಯವನ್ನು ಪೂರ್ತಿಯಾಗಿ ತಳ್ಳಿಹಾಕಲಾಗಿಲ್ಲ.
ಇದನ್ನೂ ಓದಿ: Poonch Accident: ಜಮ್ಮುವಿನ ಪೂಂಛ್ ಬಳಿ ಅಪಘಾತ; ಕರ್ನಾಟಕದ ಮೂವರು ಯೋಧರ ಸಾವು