ಬೆಂಗಳೂರು: ರಾಜ್ಯಾದ್ಯಂತ ಜನತೆ 2024ಕ್ಕೆ ಗುಡ್ ಬೈ ಹೇಳಿ 2025ನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಹೊಸ ವರ್ಷವನ್ನು (New Year Celebration) ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.
ಪ್ರೀತಿಯ ನಾಡಬಾಂಧವರಿಗೆ
— Siddaramaiah (@siddaramaiah) January 1, 2025
ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ಹೊಸ ವರ್ಷವನ್ನು ಹೊಸ ಚಿಂತನೆ,
ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ.
ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.
2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ
ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು… pic.twitter.com/bQ5fujF17D
ನಿನ್ನೆ ರಾತ್ರಿ ಬೆಂಗಳೂರಿನ ಬ್ರಿಗೇಡ್ ರಸ್ತೆ ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಹಲವು ತಾಣಗಳಲ್ಲಿ ಯುವಜನತೆ ಸೇರಿ ಸಂಗೀತ ಕುಡಿತ ಕುಣಿತಗಳ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿತ್ತು. ಇಂದು ಮುಂಜಾನೆ ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಹೊಸ ವರ್ಷದ ವಿಶೇಷ ಪೂಜೆಗಳು ನಡೆದಿದ್ದು, ಭಕ್ತಾದಿಗಳು ಅಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿ ದೇವರ ದರ್ಶನ ಪಡೆಯುವ ಮೂಲಕ ಹೊಸ ವರ್ಷದ ನೂತನ ದಿನವನ್ನು ಸ್ವಾಗತಿಸಿದರು.
ಇದನ್ನೂ ಓದಿ: New Year: ಹೊಸ ವರ್ಷ; ಎಲ್ಲೆಲ್ಲಿ ಹೇಗ್ಹೇಗೆ?