ಬೆಂಗಳೂರು: ಸಂಘ ಪರಿವಾರದ ಕೆ.ಎನ್.ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ‘ಭಾರತ ವಿಕಾಸ ಸಂಗಮ’ (Bharat Vikas Sangam) ಸಂಸ್ಥೆ ವತಿಯಿಂದ ಜ. 29 ರಿಂದ ಫೆ. 6ರವರೆಗೆ ಕಲಬುರಗಿಯ ಸೇಡಂನಲ್ಲಿ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ರಾಜ್ಯದ ಸಿಎಂ ಹಾಗೂ ಸಚಿವರು ಭಾಗವಹಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸ್ಪಷ್ಟನೆ ನೀಡಿದ್ದು, ಸಂಸ್ಥೆಯ ಹಿನ್ನೆಲೆ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.
ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.
— Siddaramaiah (@siddaramaiah) December 1, 2024
ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ.
ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು…
ಭಾರತ ವಿಕಾಸ ಸಂಗಮ ವತಿಯಿಂದ ಸೇಡಂನಲ್ಲಿ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವವನ್ನು ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಮಾಹಿತಿ ಇದ್ದ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಹೀಗಾಗಿ ಸೈದ್ಧಾಂತಿಕವಾಗಿ ಸಂಘ ಪರಿವಾರವನ್ನು ವಿರೋಧಿಸುವ ಸಿಎಂ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದರ ಬೆನ್ನಲ್ಲೇ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿ, ತಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | DK Shivakumar: ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಡಿ.ಕೆ. ಶಿವಕುಮಾರ್ ಆಕ್ರೋಶ
ಸರ್ಕಾರಿ ವಕೀಲರ ನೇಮಕಾತಿ; ಎಸ್‌ಸಿ-ಎಸ್‌ಟಿ ವಕೀಲರಿಗೆ ಶೇ.24 ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಕನಿಷ್ಠ ಶೇ.24 ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ವಕೀಲರನ್ನು (Lawyers Appointment) ನೇಮಿಸುವಾಗ ಅನುಸೂಚಿತ ಜಾತಿಗಳಿಗೆ ಶೇ. 17 ಮತ್ತು ಅನುಸೂಚಿತ ಪಂಗಡಗಳಿಗೆ ಶೇ.7 ಮೀಸಲಾತಿ ಕಲ್ಪಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡಾವಳಿಯಲ್ಲಿ ಕ್ರಮ ವಹಿಸಲು ನಿರ್ದೇಶನವಿರುತ್ತದೆ.
2022ರ ಅ. 23ರಂದು ಆದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ (ಎಸ್‌ಸಿ) ಶೇ.17 ಮತ್ತು ಅನುಸೂಚಿತ ಪಂಗಡಗಳಿಗೆ (ಎಸ್‌ಟಿ) ಶೇ. 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಆದೇಶದಲ್ಲಿ ಹೇಳಿರುವಂತೆ ಒಟ್ಟು ಶೇ. 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ಕಾನೂನು ಇಲಾಖೆ ಅಭಿಪ್ರಾಯ ನೀಡಿದೆ.
ಹೀಗಾಗಿ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7 ಸೇರಿ ಒಟ್ಟು ಶೇ.24 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಸರ್ಕಾರ ಆದೇಶ ನೀಡಿದೆ.
ಈ ಸುದ್ದಿಯನ್ನೂ ಓದಿ | Viral Video: ಮಹಿಳೆಗೆ ಡಿಕ್ಕಿ ಹೊಡೆದು ಕೆಲ ದೂರ ಎಳೆದೊಯ್ದ ಕಾರು- ಭೀಕರ ದೃಶ್ಯ ವೈರಲ್