Friday, 3rd January 2025

LPG price: ಹೊಸ ವರ್ಷದ ಮೊದಲ ದಿನ ಸಿಹಿ ಸುದ್ದಿ, ಎಲ್‌ಪಿಜಿ ಸಿಲಿಂಡರ್‌ ದರ ಇಳಿಕೆ

LPG Price Hike

ನವದೆಹಲಿ : ಹೊಸ ವರ್ಷದ ಮೊದಲ ದಿನವೇ ಎಲ್ ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ಸಿಕ್ಕಿದ್ದು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ (LPG price) ಇಂದಿನಿಂದ 14.50 ರೂ. ಕಡಿಮೆಯಾಗಿದೆ.

19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಇಳಿಕೆಯಾಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅಂದರೆ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇಂದಿನಿಂದ ಜನವರಿ 1ರಿಂದ ಬೆಂಗಳೂರಿನಲ್ಲಿ 1804 ರೂಪಾಯಿಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಲಭ್ಯವಾಗಲಿದೆ. ಕಳೆದ ತಿಂಗಳು 1818.50 ರೂ. ಅದೇ ವಾಣಿಜ್ಯ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 1911 ರೂ. ಡಿಸೆಂಬರ್‌ನಲ್ಲಿ 1927 ರೂ. ನವೆಂಬರ್ ನಲ್ಲಿಯೂ 1911.50 ರೂ. ಮುಂಬೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 16 ರೂಪಾಯಿ ಇಳಿಕೆಯಾಗಿದೆ. ಇಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನಿಂದ 1771 ರೂ.ಗೆ ಬದಲಾಗಿ 1756 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಇದರ ಬೆಲೆ ಜನವರಿ 1 ರಿಂದ ರೂ 1980.50 ರ ಬದಲು ರೂ 1966 ಆಗಿದೆ.

ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆ: 2025 ರ ಮೊದಲ ದಿನವೂ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.