ಬೆಂಗಳೂರು: ಬಿಜೆಪಿ, ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ತನಿಖಾ ಸಂಸ್ಥೆೆಗಳ ಪ್ರಗತಿ ಪರಿಶೀಲನೆ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ (Committee To Probe Scams) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಾಂಗ್ರೆೆಸ್ ಅಧಿಕಾರಕ್ಕೆೆ ಬರುತ್ತಿದ್ದಂತೆ ವಿವಿಧ ಅಕ್ರಮ ಆರೋಪಕ್ಕೆೆ ಸಂಬಂಧಿಸಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಅನೇಕ ಸಮಿತಿಗಳಿಂದ ನಿರೀಕ್ಷಿತ ವೇಗದಲ್ಲಿ ಕಾರ್ಯನಡೆಯುತ್ತಿಲ್ಲ ಎನ್ನುವ ಅಸಮಾಧಾನವನ್ನು ಹಿರಿಯ ಸಚಿವರುಗಳೇ ಹೊರಹಾಕಿದ್ದರು. ಆದ್ದರಿಂದ ಈ ಎಲ್ಲ ಸಮಿತಿಗಳ ತನಿಖೆಯ ಪ್ರಗತಿ, ಸಮನ್ವಯ ಸೇರಿ ಮುಂದಿನ ಕಾರ್ಯವಿಧಾನದ ಬಗ್ಗೆೆ ಚರ್ಚಿಸಲು ಸಮಿತಿಯನ್ನು ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Cyber Security: ಆನ್‌ಲೈನ್ ವಂಚನೆ ತಡೆಯಲು ಕೇಂದ್ರ ಸರ್ಕಾರದಿಂದ 5000 ಸೈಬರ್ ಕಮಾಂಡೊಗಳ ನೇಮಕ!
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಈ ಸಮಿತಿಗೆ ಅಧ್ಯಕ್ಷರಾಗಿದ್ದು, ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ ಹಾಗೂ ಸಂತೋಷ್ ಲಾಡ್ ಸದಸ್ಯರಾಗಿದ್ದಾರೆ.