ತುಮಕೂರು : ಸಾಮಾಜಿಕ ಜಾಲತಾಣದಲ್ಲಿ (Social media) ಕೋಮು ವೈಷಮ್ಯ (Communal hatred) ಪ್ರಚೋದಿಸುವ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ (Shakuntala Nataraj) ವಿರುದ್ಧ ತುಮಕೂರಿನ (Tumkur news) ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಂಬಂಧಪಟ್ಟಂತೆ ಕೋಮು ವೈಷಮ್ಯಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಶಕುಂತಲಾ ನಟರಾಜ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, “ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಆದರೆ ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗ್ತಾರೆ” ಎಂದು ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
Road Accident: ಬೆಂ-ಮೈ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ, ದಂಪತಿ ಸೇರಿ ಮೂವರ ದುರ್ಮರಣ
ರಾಮನಗರ : ರಾಮನಗರ ಜಿಲ್ಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ (Bengauru- Mysuru expressway) ಕೆಎಸ್ಆರ್ಟಿಸಿ ಬಸ್ಸು ಹಾಗೂ ಕಾರಿನ ಮಧ್ಯ ಭೀಕರ ಅಪಘಾತ (Road Accident) ನಡೆದಿದ್ದು, ಅಪಘಾತದಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಶಿವಾಜಿ ನಗರದ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ದಂಪತಿ ಹಾಗೂ ಚಾಲಕ ಮೃತಪಟ್ಟಿದ್ದಾರೆ. ಲಿಯಾಕತ್ (48) ಅಸ್ಮ (38) ನೂರ್ (46) ಎನ್ನುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಾಮನಗರ ತಾಲೂಕಿನ ಸಂಗಮದೊಡ್ಡಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಕಾರು ಹೋಗುತ್ತಿತ್ತು. ಡಿವೈಡರ್ ಬಳಿ ಸೂಚನಾ ಫಲಕ ಇಲ್ಲದ್ದರಿಂದ ಈ ಅಪಘಾತ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.
ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಳಿಕ ಕೆಎಸ್ಆರ್ಟಿಸಿ ಬಸ್ಗೆ ಹೋಗಿ ಗುದ್ದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ, ಕಾರು ಚಾಲಕ ಹೀಗೆ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತಂತೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.