Thursday, 12th December 2024

ಜಾಲಹಳ್ಳಿ ಮತಗಟ್ಟೆ ಬಳಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಚಕಮಕಿ

BJP and Congress

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಜಾಲಹಳ್ಳಿ ಸಮೀಪದ ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡ ಘಟನೆ ನಡೆದಿದೆ.

ಆರ್. ಆರ್. ನಗರ ವ್ಯಾಪ್ತಿಯ ಕ್ಲಾರೆಂಟ್ ಶಾಲೆ ಮತಗಟ್ಟೆ ಸಮೀಪ ಟೇಬಲ್ ಹಾಕುವ ವಿಚಾರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿಕೊಂಡಿದ್ದಾರೆ.

ಗಲಾಟೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಯಾವುದೇ ತೊಂದರೆ ಆಗ ದಂತೆ ನೋಡಿಕೊಂಡರು. ಜನರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಮತದಾರರರಿಗೆ ಸ್ಲಿಪ್ ನೀಡಲು ರಾಜಕೀಯ ಪಕ್ಷಗಳು ಮತಗಟ್ಟೆ ಬಳಿ ಟೇಬಲ್ ಹಾಕುತ್ತಿದ್ದವು. ಈ ಸಮಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಆರ್. ಅರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಹೆಚ್. ಕುಸುಮಾ, ಬಿಜೆಪಿಯಿಂದ ಮುನಿರತ್ನ ಅಭ್ಯರ್ಥಿಗಳಾಗಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವನ್ನು ನೀಡಲಾಗಿದೆ.