Wednesday, 6th November 2024

Congress guarantees: 5 ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿವೆ: ಪುರುಷೋತ್ತಮ ಬಿಳಿಮಲೆ

Congress guarantees

ಮೈಸೂರು: ಕೊರೊನಾ ಕಾರಣದಿಂದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು, ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು (Congress guarantees) ಪರಿಹಾರವಾಯಿತು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.

ಪುರುಷೋತ್ತಮ ಬಿಳಿಮಲೆ

ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 2017 ರಿಂದ ಭಾರತದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಾ, ಕೊರೊನಾ ಕಾಲದಲ್ಲಿ ಇನ್ನಷ್ಟು ನೆಲಕಚ್ಚಿತು. ನಿರುದ್ಯೋಗ, ಬಡತನ ಇಮ್ಮಡಿಯಾಗಿ ಜಿಡಿಪಿ ಕುಸಿದಿತ್ತು. ಇಂತಹ ಭಯಾನಕ ಆರ್ಥಿಕ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಐದು ಗ್ಯಾರಂಟಿಗಳು ರಾಜ್ಯ ಸ್ಮಶಾನ ಆಗದಂತೆ ತಡೆದಿದೆ. ಕೊರೊನಾ ಕಾಲದ ಬಿಕ್ಕಟ್ಟುಗಳಿಗೆ ಗ್ಯಾರಂಟಿಗಳು ಪರಿಹಾರವಾಯಿತು. ಇದನ್ನು ನಾವೆಲ್ಲಾ ಧೈರ್ಯದಿಂದ ಹೇಳಬೇಕು. ದೇಶಕ್ಕೆ ಮಾದರಿಯಾದ ಈ ಯೋಜನೆಗಳು ಜನಕಲ್ಯಾಣಕ್ಕೆ ಹೇಗೆ ಸಹಕರಿಸಿತು ಎಂಬುದನ್ನು ಹೇಳಬೇಕು ಎಂದು ತಿಳಿಸಿದರು.

ನಾಟಕಕಾರ, ಪ್ರಾಧ್ಯಾಪಕ ಕೆ.ವೈ.ನಾರಾಯಣಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಪ್ರಜಾತಂತ್ರವನ್ನು ಗಟ್ಟಿಗೊಳಿಸಿವೆ. ಡಾ.ಬಿ.ಆರ್.ಅಂಬೇಡ್ಕರ್ ಆಶಯವನ್ನು ಘೋಷಿಸದೇ ಈಡೇರಿಸಿವೆ. ಬಡವರಿಗೆ ಈ ಗ್ಯಾರಂಟಿಗಳು ಸಾಮಾಜಿಕವಾಗಿ ಚಾಲನಾ ಸಾಮರ್ಥ್ಯವನ್ನು ನೀಡಿವೆ. ಸಿದ್ದರಾಮಯ್ಯ ಅವರು ಸೂಕ್ಷ್ಮ ಮನಸ್ಸಿನ ನಾಯಕರು. ಇವರಿಂದ ಮಾತ್ರ ಸಮಾಜಕ್ಕೆ ಈ ಚಾಲನಾ ಸಾಮರ್ಥ್ಯ ನೀಡಲು ಸಾಧ್ಯ. ಹಸಿದವರ ಹೊಟ್ಟೆಗೆ ಅನ್ನ ಕೊಡುವುದೇ ದೇವರಿಗೆ ಕೊಡುವ ಕಾಣಿಕೆ. ಇದನ್ನು ನಾವು ಪ್ರಾಮಾಣಿಕವಾಗಿ ಒಪ್ಪಿ, ಸಾರ್ವಜನಿಕವಾಗಿ ಹೇಳಬೇಕಿದೆ ಎಂದು ಹೇಳಿದರು.

ಧಾರವಾಡದ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ.ಎಂ.ಚಂದ್ರ ಪೂಜಾರಿ ಮಾತನಾಡಿ, ಉಚಿತ ಯೋಜನೆಗಳನ್ನು ಜಾರಿ ತಂದ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಮೊದಲ ಸ್ಥಾನಗಳಲ್ಲಿ ಇದ್ದು, ಜಿಡಿಪಿ ಬೆಳವಣಿಗೆ ಉತ್ತಮವಾಗಿವೆ. ಉಚಿತ ಯೋಜನೆಗಳನ್ನು ಜಾರಿ ಮಾಡದ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ ರಾಜ್ಯಗಳು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅತ್ಯಂತ ಕುಸಿದು, ಜಿಡಿಪಿ ಕೂಡ ಕುಸಿದಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿಯಾದ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಅನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ‌ ಆಗ್ರಹ

ಮೈಸೂರು: ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪ್ರಧಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸಿರುವ ಬಗ್ಗೆ ನಗರದಲ್ಲಿ ಸಿಎಂ ಪ್ರತಿಕ್ರಿಯಿಸಿ, ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Lakshmi Hebbalkar: ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಲಿ; ಲಕ್ಷ್ಮೀ ಹೆಬ್ಬಾಳಕರ್

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ

ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ. ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ , ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.