Friday, 27th December 2024

Congress session: ಬೆಳಗಾವಿಯಲ್ಲಿ ಕಾಶ್ಮೀರದ ತಿರುಚಿದ ನಕ್ಷೆ ಪ್ರದರ್ಶಿಸಿ ಕಾಂಗ್ರೆಸ್ ಅಗೌರವ:‌ ಬಿಜೆಪಿ ಆರೋಪ

Congress session

ಬೆಳಗಾವಿ: ಬೆಳಗಾವಿ (Belagavi news) ಅಧಿವೇಶನ ಶತಮಾನೋತ್ಸವದಲ್ಲಿ (Congress session) ತಿರುಚಿದ ಕಾಶ್ಮೀರದ (Kashmir) ನಕ್ಷೆ ಪ್ರದರ್ಶಿಸಿ ಕಾಂಗ್ರೆಸ್‌ ಪಕ್ಷ ಭಾರತಕ್ಕೆ ಅಗೌರವ ತೋರಿದೆ ಎಂದು ಬಿಜೆಪಿ (BJP) ಆರೋಪಿಸಿದೆ. ಕಾಂಗ್ರೆಸ್‌ ನಗರದಾದ್ಯಂತ ಪ್ರದರ್ಶಿಸಿರುವ ಬ್ಯಾನರ್-‌ ಫ್ಲೆಕ್ಸ್‌ಗಳಲ್ಲಿ ಭಾರತದೊಳಗಿನ ಕಾಶ್ಮೀರದ ಭಾಗವನ್ನು ಪಾಕ್‌ಗೆ ಸೇರಿದೆ ಎನ್ನುವಂತೆ ತೋರಿಸಲಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಬಿಜೆಪಿಯ ಕರ್ನಾಟಕದ ಸೋಶಿಯಲ್‌ ಮೀಡಿಯಾ ಎಕ್ಸ್‌ ಹ್ಯಾಂಡಲ್‌ನಲ್ಲಿ ಇದನ್ನು ಟೀಕಿಸಲಾಗಿದೆ. “ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ Indian National Congress – Karnataka..!! ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ” ಎಂದು ಆರೋಪಿಸಿದೆ.

“ವೈಯುಕ್ತಿಕ ಸ್ವಾರ್ಥ ಸಾಧನೆಗಾಗಿ, ಓಲೈಕೆ ರಾಜಕಾರಣಕ್ಕಾಗಿ ಕಾಂಗ್ರೆಸ್ ಎಂತಹಾ ಹೀನ ಕೆಲಸಕ್ಕಾದರೂ “ಸಿದ್ದ” ಎಂಬುದಕ್ಕೆ ಬೆಳಗಾವಿಯಲ್ಲಿ ಹಾಕಿಸಿರುವ ಬ್ಯಾನರ್‌ಗಳೇ ಸಾಕ್ಷಿ. ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಈ ವಿವಾದಿತ ಬ್ಯಾನರ್ ಗಳನ್ನು ತೆರವುಗೊಳಿಸಿ, ಭಾರತದ ನಕಾಶೆಯನ್ನು ತಿರುಚಿದ ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಈ ಬಿಜೆಪಿ ಎಚ್ಚರಿಸಿದೆ.

ಮೂವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿರುವ ರಾಜ್ಯ ಸರಕಾರ, ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ರವಿ ಎಂ.ಆರ್, ಐಎಎಸ್ (ಕೆಎನ್: 2012), ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕೋಲಾರ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಿಸಲಾಗಿದೆ. ಐಎಎಸ್ ಅಧಿಕಾರಿ ಅಕ್ರಂ ಪಾಷಾ ವರ್ಗಾವಣೆ ಮಾಡಿದೆ.

ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಕರ್ನಾಟಕ ಗೃಹ ಮಂಡಳಿ ಆಯುಕ್ತರಾಗಿ ಬೆಂಗಳೂರು ಉಪ ಆಯುಕ್ತೆ ಕವಿತಾ ಎಸ್.ಮನ್ನಿಕೇರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕವಿತಾ ಎಸ್.ಮನ್ನಿಕೇರಿ, ಐಎಎಸ್ (ಕೆಎನ್: 2012), ಆಯುಕ್ತರು, ಕರ್ನಾಟಕ ಗೃಹ ಮಂಡಳಿ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕಬ್ಬು ಅಭಿವೃದ್ಧಿ ಆಯುಕ್ತರಾಗಿ ಮತ್ತು ಬೆಂಗಳೂರು ಸಕ್ಕರೆ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ.ಆರ್ ಅವರನ್ನು ವರ್ಗಾವಣೆ ಮಾಡಲಾಗಿದೆ