ರಾಮನಗರ: ರಾಜ್ಯದಲ್ಲಿ ಊಹಿಸಲೂ ಸಾಧ್ಯವಾಗದ ಅಮಾನವೀಯ ಘಟನೆಯೊಂದು ನಡೆದಿದೆ. ರಾಮನಗರ ಜಿಲ್ಲೆಯ (Ramanagar news) ದಯಾನಂದ್ ಸಾಗರ ಆಸ್ಪತ್ರೆಯಲ್ಲಿ (Hospital) ತಾಯಿಯೊಬ್ಬಳು ತನ್ನ ಮಗುವಿನ ಬಗ್ಗೆ ಅತ್ಯಂತ ಕ್ರೂರವಾಗಿ ವರ್ತಿಸಿದ್ದು, ಎರಡು ದಿನದ ಮಗುವನ್ನು ಟಾಯ್ಲೆಟ್ನಲ್ಲಿ ಹಾಕಿ ಫ್ಲಶ್ (Crime news) ಒತ್ತಿದ್ದಾಳೆ.
ರಾಮನಗರದಲ್ಲಿ ವರದಿಯಾದ ಈ ಅಮಾನವೀಯ ಘಟನೆ ಆಸ್ಪತ್ರೆಯವರನ್ನು ಮಾತ್ರವಲ್ಲ ಎಲ್ಲರನ್ನೂ ಶಾಕ್ನಲ್ಲಿ ಕೆಡವಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಎರಡು ದಿನ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಸ್ವಂತ ಮಗುವನ್ನೇ ಟಾಯ್ಲೆಟ್ ಗೆ ಹಾಕಿ ಫ್ಲಶ್ ಮಾಡಿರುವ ಪಾಪಿ ತಾಯಿ ಯಾರು ಎಂಬುದನ್ನು ಪೊಲೀಸರು ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಾರೋಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಹಾಗೂ ಸುತ್ತಮುತ್ತ ಕಳೆದ ಒಂದು ವಾರದಲ್ಲಿ ನಡೆದ ಜನನ ದಾಖಲೆಗಳನ್ನು, ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಪ್ರೀತಿಸಿ ಮದುವೆಯಾದ ಯುವಕನನ್ನು ಕೊಚ್ಚಿ ಕೊಂದ ಯುವತಿ ಮನೆಯವರು
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಯುವಕನೊಬ್ಬನನ್ನು ಭೀಕರವಾಗ ಕೊಚ್ಚಿ ಕೊಲೆ ಮಾಡಲಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಯುವಕನನ್ನು, ಯುವತಿಯ ಮನೆಯ ಸುಮಾರು 20 ಜನರು ಯುವಕನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಯುವಕ ಮಂಜುನಾಥ್ ಎಂಬಾತ. ಯುವತಿ ರಕ್ಷಿತಾ ಮನೆಯವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕೂಡ ಕಳೆದ ಮೂರು ತಿಂಗಳ ಹಿಂದೆ ಇವರಿಬ್ಬರು ದೇವಸ್ಥಾನದಲ್ಲಿ ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾಗಿದ್ದರು.
ಮಂಜುನಾಥ್ ಮೇಲೆ ಕೋಪಗೊಂಡಿದ್ದ ರಕ್ಷಿತಾ ಕುಟುಂಬ ಬುಧವಾರ ಮಧ್ಯಾಹ್ನ ಏಕಾಏಕಿ ಹಲ್ಲೆ ನಡೆಸಿದೆ. ಸುಮಾರು 20 ಮಂದಿ ಮಂಜುನಾಥ್ ಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ತಂದೆ ಚಂದ್ರಪ್ಪ ಹಾಗೂ ತಾಯಿ ಅನಸೂಯಮ್ಮಗೂ ಗಂಭೀರ ಗಾಯವಾಗಿದೆ .ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಹ್ಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder Case: ಕೊಲೆಯಾದ ಬಾಲಕಿಯ ಶವಕ್ಕೆ 18 ವರ್ಷಗಳ ಬಳಿಕ ಅಂತ್ಯಸಂಸ್ಕಾರ!