Monday, 13th May 2024

ಸಾಂಸ್ಕೃತಿಕ ಚಟುವಟಿಕೆ ಜೀವನದ ಅವಿಭಾಜ್ಯ ಅಂಗ: ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ

ಇಂಡಿ: ವಿದ್ಯಾರ್ಥಿಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಕೆಗಳು ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗಗಳಾಗಿವೆ ಎಂದು ಶಾಲಾ ಶಿಕ್ಷಣ ಪಪೂ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಕೆ.ಹೊಸಮನಿ ಹೇಳಿದರು.

ಅವರು ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಶ್ರೀ ಭಾಗ್ಯವಂತಿ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜು ಹಾಗೂ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ದಿ ನಿಧಿ ಹಾಗೂ ಉಪ ನರ‍್ದೇಶಕರು ಶಾಲಾ ಶಿಕ್ಷಣ ಇಲಾಖೆ(ಪಪೂ) ಇವರ ಸಹಯೋಗದೊಂದಿಗೆ ಹಮ್ಮಿ ಕೊಂಡ ೨೦೨೩-೨೪ ನೇ ಸಾಲಿನ ವಿಜಯಪುರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆಗಳ ಸ್ರ‍್ಧೆಗಳ ಕರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಲೆ, ಸಾಹಿತ್ಯ, ಸಂಗೀತ ಸಾಂಸ್ಕೃತಿಕ ಲೋಕದ ಜಗತ್ತನ್ನು ಪರಿಚಯಿಸುತ್ತದೆ.ಬೇಸರವಾದಾಗ ಆಸರೆಯಂತೆ ಸಾಹಿತ್ಯ, ಸಂಗೀತಗಳು ಮಾನವನಿಗೆ ಸಂಜೀವಿನಿಯಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ದಿಸೆಯಲ್ಲಿ ಸಾಂಸ್ಕೃತಿಕ ಜಗತ್ತನ್ನು ಪರಿಚಯಿಸಿಕೊಳ್ಳುವುದರಿಂದ ತಮ್ಮ ಮುಂದಿನ ಭವಿಷ್ಯಕ್ಕೆ ಸ್ಪರ‍್ತಿಯಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಪಠ್ಯಚಟುವಟಿಕೆಯ ಜತೆಯಲ್ಲಿ ಕ್ರೀಡೆ,ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಪಠ್ಯ ಶಿಕ್ಷಣ, ಕ್ರೀಡೆ ಹಾಗೂ ಕಲೆ ಮತ್ತು ಸಂಸ್ಕೃತಿ ವಿಭಾಗಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರುವುದನ್ನು ವಿದ್ಯರ‍್ಥಿಗಳು ಮತ್ತು ಪೋಷಕರು ಅರಿತುಕೊಳ್ಳಬೇಕು ಎಂದರು. ಇಂದು ಶಿಕ್ಷಣ ಕ್ಷೇತ್ರ ಅಭಿವೃದ್ದಿ ಹೊಂದಿದಷ್ಟೇ ಕ್ರೀಡಾ ಮತ್ತು ಕಲೆ-ಸಾಂಸ್ಕೃತಿ ಕ್ಷೇತ್ರ ಅಭಿವೃದ್ದಿ ಸಾಧಿಸುತ್ತದೆ.ಈ ಎರಡು ಕ್ಷೇತ್ರಗಳು ಬೆಳವಣಿಗೆಯಾಗ ಬೇಕಾದರೆ ಶಾಲಾ-ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯರ‍್ಥಿಯೂ ಕ್ರೀಡೆ,ಕಲೆ ಮತ್ತು ಸಾಂಸ್ಕೃತಿ ಕ್ಷೇತ್ರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪಪೂ ಉಪ ನರ‍್ದೇಶಕರ ಕರ‍್ಯಾಲಯದ ಶಾಖಾಧಿಕಾರಿ ಬಿ.ಟಿ.ಗೊಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಹುಭಾಷಾ ಶೈಕ್ಷಣಿಕ ವ್ಯವಸ್ಥೆ , ವಿವಿಧ ಸಂಸ್ಕೃತಿ, ಭಾಷೆ, ಆಚಾರ, ವಿಚಾರಗಳು ಸೇರಿದಂತೆ ಹತ್ತು ಹಲವು ಸ್ಥರಗಳನ್ನು ಹೊಂದಿರುವ ಭಾರತ ವಿಶ್ವದಲ್ಲಿಯೇ ಇನ್ನಿತರ ರಾಷ್ಟ್ರಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದೆ.

ದೇಶದಲ್ಲಿ ಪ್ರತಿ ೧೦೦ ಕಿಮಿ.ಗೆ ವಿವಿಧ ಭಾಷೆಗಳನ್ನು ಮಾತನಾಡುವ ಹಾಗೂ ವಿಭಿನ್ನ ಸಂಸ್ಕೃತಿ ಕಾಣಬಹುದು.ವಿಭಿನ್ನ ಆಹಾರಗಳನ್ನು ತಿನ್ನುವ ಮತ್ತು ವೈವಿದ್ಯಮಯ ಬಟ್ಟೆಗಳನ್ನು ಧರಿಸುವ ವಿವಿಧ ರೀತಿಯ ಜನರನ್ನು ಆಶ್ರಯಿಸುವ ಅನನ್ಯ ದೇಶವಾಗಿದ್ದು, ವಿವಿಧತೆಯಲ್ಲಿ ಏಕತೆ ವಿಶ್ವದೆಲ್ಲೆಡೆ ಭಾರತ ವೊಂದು ಅತ್ಯುತ್ತಮ ಉದಾಹರಣೆಯಾಗಿದೆ.

ನಮ್ಮ ದೇಶ ಸಾವಿರಾರು ವರ್ಷಗಳ ಸಂಸ್ಕೃತಿಯನ್ನು ಹೊಂದಿದೆ. ಕಲೆ, ಸಾಹಿತ್ಯ, ಸಂಗೀತ, ವಿಜ್ಞಾನ, ಗಣಿತ, ತತ್ವಶಾಸ್ತ್ರ ಸೇರಿದಂತೆ ಜಾಗತಿಕವಾಗಿ ಪ್ರತಿ ಯೊಂದು ಕ್ಷೇತ್ರದಲ್ಲಿಯೂ ನಮ್ಮದೇ ಆದ ಕೊಡುಗೆಗಳನ್ನು ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಓದು ಬರಹದಿಂದ ಶೈಕ್ಷಣಿಕ ಬುದ್ದಿಮತ್ತೆಯನ್ನು ಕಂಡು ಕೊಳ್ಳಬಹುದು.ಆದರೆ ಕ್ರೀಡೆ ಮತ್ತು ಸಾಂಸ್ಕೃತಿಕ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳನ್ನು ಪಾಲ್ಗೊಳ್ಳುವಂತೆ ಮಾಡುವ ಮೂಲಕ ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ದುಂಡಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಶಾಂತಪ್ಪ ದಶವಂತ ಅಧ್ಯಕ್ಷತೆ ವಹಿಸಿದ್ದರು. ರಮೇಶ ಬಿರಾದಾರ, ಕಾಮಣ್ಣ ದಶವಂತ, ಎಂ.ಡಿ.ಹೆಬ್ಬಿ, ಉಪನ್ಯಾಸಕ ಆರ್‌.ಸಿ.ಹಿರೇಮಠ ಕಾರ್ಯಕ್ರಮದಲ್ಲಿ ಇದ್ದರು. ಪ್ರಾಚರ‍್ಯ ಚಂದ್ರಶೇಖರ ದಶವಂತ ಸ್ವಾಗತಿಸಿದರು. ಸುರೇಶ ಜತ್ತಿ ನಿರೂಪಿಸಿ ದರು. ಎಸ್‌.ಎಸ್.ಬೇಡರ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!