ಬೆಂಗಳೂರು: ರಾಜಧಾನಿಯ (Bengaluru News) ದಾಸರಹಳ್ಳಿಯ ಚೊಕ್ಕಸಂದ್ರದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast) ಏಳು ಮಂದಿ ಗಂಭೀರವಾಗಿ (Injure) ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಫೋಟದಿಂದ ದಿಜುಧಾರ್ (34), ಅಂಜಲಿದಾಸ್ (31), ಮನುಶ್ರೀ (3), ಮನು(25), ತಿಪ್ಪೇರುದ್ರಸ್ವಾಮಿ (50), ಪಕ್ಕದ ಮನೆ ಶೋಭ (60) ಮತ್ತು ಕರೀಬುಲ್ಲ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ದಿಜುಧಾರ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಎದುರು ಮನೆಯವರಿಗೂ ಗಾಯವಾಗಿದೆ.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಸಂದ್ರದಲ್ಲಿನ ಆರ್.ಎ ಫ್ಯಾಷನ್ ಗಾರ್ಮೆಂಟ್ಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. 40 ಲಕ್ಷ ರೂಪಾಯಿಗೂ ಹೆಚ್ಚು ಬೆಲೆಬಾಳುವ ಬಟ್ಟೆ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. R.A.ಫ್ಯಾಷನ್ ಗಾರ್ಮೆಂಟ್ಸ್ ಅರುಣ್ ಮತ್ತು ಶಿವು ಎಂಬುವರಿಗೆ ಸೇರಿದೆ.
ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ದಾರುಣ ಘಟನೆ, ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು
ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ.
ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ ಮಗುವಿಗೆ ಉಸಿರಾಟದ ಸಮಸ್ಯೆ ಉಲ್ಬಣಿಸಿತು. ನಿನ್ನೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮಗು ಮೃತಪಟ್ಟಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Cylinder blast: ಸಿಲಿಂಡರ್ ಸ್ಫೋಟ- ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೇ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವು