ಬೆಂಗಳೂರು: ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.
ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2022ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.27.25ಕ್ಕೆ ಪರಿಷ್ಕರಿಸಿ, ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 01-01-2022ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇ.27.25ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.t
ಈ ತುಟ್ಟಿಭತ್ಯೆ ದರಗಳು ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಅನ್ವಯವಾಗಲಿವೆ.