ಬೆಂಗಳೂರು: ನಟ ಡಾಲಿ ಧನಂಜಯ ಮತ್ತು ಧನ್ಯತಾ ಅವರ ನಿಶ್ಚಿತಾರ್ಥ ಇತ್ತೀಚೆಗೆ ಸರಳವಾಗಿ ನೆರವೇರಿತ್ತು. ಇದೀಗ ಮದುವೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ಈ ಜೋಡಿ ಭಾನುವಾರ ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಮದುವೆ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಇನ್ನು ಫೆ.16ರಂದು ವಿವಾಹ ನಡೆಯಲಿರುವ ಹಿನ್ನೆಲೆಯಲ್ಲಿ ಪೂಜೆ ಮಾಡಿಸಿ, ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿ ಡಾಲಿ ಮತ್ತು ಧನ್ಯತಾ (Daali Dhananjaya) ಆಶೀರ್ವಾದ ಪಡೆದಿದ್ದಾರೆ.
ಡಾಲಿ ಧನಂಜಯ ಅವರು ಯಾವುದೇ ಸಿನಿಮಾ ಕೆಲಸಗಳನ್ನು ಶುರು ಮಾಡುವ ಮೊದಲು ಬಂಡೆ ಮಹಾಕಾಳಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಅದರಂತೆ ತಮ್ಮ ಮದುವೆ ಕಾರ್ಯ ಶುರು ಮಾಡುವ ಮೊದಲು ಭಾವಿ ಪತ್ನಿ ಧನ್ಯತಾ ಅವರ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿಕೊಂಡು ದೇವಿಯ ಆಶೀರ್ವಾದ ಪಡೆದಿದ್ದಾರೆ.
ಫೆಬ್ರವರಿ 16ರಂದು ಡಾಲಿ ಧನಂಜಯ ಅವರ ಮದುವೆ ಮೈಸೂರಿನ ಅಂಬಾವಿಲಾಸ ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಗ್ರೌಂಡ್ ನಲ್ಲಿ ನಡೆಯಲಿದೆ. ಶನಿವಾರ ಆರತಕ್ಷತೆ ಭಾನುವಾರ ವಿವಾಹ ನೆರವೇರಲಿದೆ. ಡಾಲಿ ಮದುವೆಗೆ ಕೇವಲ ಸಿನಿಮಾ ಗಣ್ಯರು ಮಾತ್ರವಲ್ಲದೇ ರಾಜಕೀಯ ಗಣ್ಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Pushpa 2: ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿರುವ ಪುಷ್ಪ 2; 1500 ಕೋಟಿ ರೂ. ಗಳಿಕೆಯತ್ತ ದಾಪುಗಾಲು
ಅರಸೀಕೆರೆಯ ಕಾಳೇನಹಳ್ಳಿಯ ನಿವಾಸದಲ್ಲಿ ಧನಂಜಯ ಹಾಗೂ ಧನ್ಯತಾ ಅವರ ನಿಶ್ಚಿತಾರ್ಥ ನ.17ರಂದು ನೆರವೇರಿತ್ತು. ಕುಟುಂಬಸ್ಥರು, ಸಂಬಂಧಿಕರು ಹಾಗೂ ಆಪ್ತರ ಸಮ್ಮುಖದಲ್ಲಿ ಲಗ್ನಪತ್ರಿಕೆ ಬರೆಸೋ ಶಾಸ್ತ್ರ ನೆರವೇರಿತ್ತು. ದೀಪಾವಳಿ ಹಬ್ಬಕ್ಕೆ ನಟ ಡಾಲಿ ಧನಂಜಯ್ (Daali Dhananjaya) ಅವರು ತಾವು ಮದುವೆಯಾಗುತ್ತಿರುವುದನ್ನು (Daali Dhananjaya marriage) ಖಚಿತಪಡಿಸಿದ್ದರು. ಮದುವೆ ಯಾವಾಗ ಎನ್ನುವ ಪ್ರಶ್ನೆ ಹೋದಲ್ಲಿ ಬಂದಲ್ಲಿ ಡಾಲಿಗೆ ಎದುರಾಗುತ್ತಿತ್ತು. ಹೀಗಾಗಿ ಡಾಲಿ ಧನಂಜಯ ಅವರು ದೀಪಾವಳಿ ಹಬ್ಬದಂದು ಬಾಳಸಂಗಾತಿಯನ್ನು ಪರಿಚಯಿಸಿದ್ದರು.