Sunday, 15th December 2024

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಕೋಲಾರ: ಕೊಲ್ಹಾರ. “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳ ಮಂಗಳವಾರದಂದು ಆಯಾ ತಾಲ್ಲೂಕು ಕಛೇರಿಗೆ ಭೇಟಿ ನೀಡುವ ಪ್ರಯುಕ್ತ ಇಂದು ಕೊಲ್ಹಾರ ತಾಲ್ಲೂಕ ತಹಶಿಲ್ದಾರ ಕಚೇರಿಗೆ ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಲಿದ್ದು ತಾಲ್ಲೂಕ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಕುಂದುಕೊರತೆಯ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.