Thursday, 19th September 2024

DK Shivakumar: ಆರೋಪ ಮಾಡುವುದೇ ಬಿಜೆಪಿ ಕೆಲಸ; ಡಿ.ಕೆ. ಶಿವಕುಮಾರ್

DK Shivakumar

ಕಲಬುರಗಿ: ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ (BJP) ಕೆಲಸ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ಕಲಬುರಗಿಯಲ್ಲಿ (Kalaburagi) ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗಮಂಗಲ (Nagamangala), ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ ವಿಸರ್ಜನೆ ಗಲಾಟೆಗಳಲ್ಲಿ ಪಿಎಫ್‌ಐ (PFI), ಬಾಂಗ್ಲಾ ವಲಸಿಗರ ಕೈವಾಡವಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, “ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆಗಳ ವಿರುದ್ಧ ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಸರ್ಕಾರ ಮಾಡುತ್ತದೆ. ಪೊಲೀಸ್ ಇಲಾಖೆ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾತನಾಡುವವರು ಮಾತನಾಡಲಿ ಎಂದರು.

ಈ ಸುದ್ದಿಯನ್ನೂ ಓದಿ | Bengaluru Airport: ಹೊಸ ಮೈಲುಗಲ್ಲು ಸ್ಥಾಪಿಸಿದ ಕೆಐಎ: 100 ನಗರಗಳಿಗೆ ಬೆಂಗಳೂರಿನಿಂದ ನೇರ ವಿಮಾನ ಸೌಲಭ್ಯ

ಪರಪ್ಪನ ಅಗ್ರಹಾರದ ಮೇಲೆ ಪೊಲೀಸ್ ದಾಳಿ, ಗುತ್ತಿಗೆದಾರ ಚೆಲುವರಾಜು ಅವರಿಂದ ಶಾಸಕ ಮುನಿರತ್ನ ಅವರ ಮತ್ತೊಂದು ಆಡಿಯೋ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, ನಾನು ಅಮೆರಿಕದಲ್ಲಿದ್ದ ಕಾರಣಕ್ಕೆ ಯಾವ ವಿಚಾರಗಳ ಬಗ್ಗೆಯೂ ಮಾಹಿತಿ ಇಲ್ಲ. ಎಲ್ಲದರ ಬಗ್ಗೆ ತಿಳಿದು ಮಾತನಾಡುತ್ತೇನೆ ಎಂದು ಹೇಳಿದರು.

ಅಮೇರಿಕ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಮೇರಿಕಾದ ಚುನಾವಣಾ ಪದ್ಧತಿ, ಅಲ್ಲಿನ ಯುವಕರ ಉತ್ಸಾಹ, ಆಸಕ್ತಿ ಸೇರಿದಂತೆ ಅನೇಕ ವಿಚಾರಗಳನ್ನು ನಾವು ಕಲಿಯಬೇಕಿದೆ. ಅಮೇರಿಕಾಗೆ ಕುಟುಂಬ ಸಮೇತ ಖಾಸಗಿ ಪ್ರವಾಸಕ್ಕೆ ಹೋಗಿದ್ದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | KEA Exam: ಪಿಎಸ್‌ಐ, ವಿಎಒ, ಕೆ-ಸೆಟ್‌ ಸೇರಿ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಅಮೇರಿಕಾ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಕಮಲ ಹ್ಯಾರಿಸ್ ಸೇರಿದಂತೆ ನಾನು ಯಾರನ್ನೂ ಭೇಟಿಯಾಗಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನಾನು ಹೋದ ಸಮಯದಲ್ಲೇ ಚುನಾವಣಾ ರ‍್ಯಾಲಿ ನಡೆಯುತ್ತಿತ್ತು. ಅದು ಹೇಗೆ ನಡೆಯುತ್ತದೆ ಎಂದು ವೀಕ್ಷಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.