ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Schemes) ಕಾಂಗ್ರೆಸ್ ಸರ್ಕಾರ (Congress Government) ಹಿಂದಕ್ಕೆ ಪಡೆಯುತ್ತದೆ ಎಂದು ಮೋದಿ ಅವರನ್ನು ಪ್ರಧಾನಮಂತ್ರಿ ಕಚೇರಿ ದಾರಿ ತಪ್ಪಿಸಿದೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಅವರು ಪ್ರತಿಕ್ರಿಯೆ ನೀಡಿದರು.
ಯಾವುದೇ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ
ಗ್ಯಾರಂಟಿ ಯೋಜನೆಗಳ ವಿರುದ್ಧ ಪ್ರಧಾನಿ ಮೋದಿ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ಕಳೆದ 60 ವರ್ಷಗಳಲ್ಲಿ ನೀಡಿದ ಯಾವುದೇ ಯೋಜನೆಗಳನ್ನು ಹಿಂದಕ್ಕೆ ಪಡೆದ ಇತಿಹಾಸವಿಲ್ಲ. ಉಳುವವನಿಗೆ ಭೂಮಿ, ಪಿಂಚಣಿ ಯೋಜನೆ, ನರೇಗಾ ಸೇರಿದಂತೆ ಅನೇಕ ಯೋಜನೆಗಳು ಈಗಲೂ ಚಾಲ್ತಿಯಲ್ಲಿವೆ ಎಂದರು.
ಈ ಸುದ್ದಿಯನ್ನೂ ಓದಿ | CM Siddaramaiah: ಕನ್ನಡಿಗರಿಗೆ ಕೇಂದ್ರದ ಅನ್ಯಾಯ; ಲೋಕಸಭೆಯಲ್ಲಿ ಸಂಸದರು ದನಿಯೆತ್ತಲಿ: ಸಿಎಂ ಸಿದ್ದರಾಮಯ್ಯ
ಬಿಜೆಪಿಯಿಂದ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕೆಟ್ಟ ರಾಜಕೀಯ ಗಿಮಿಕ್ ನಡೆಯುತ್ತಿದೆ. ದೇಶದ ಉನ್ನತ ಕಚೇರಿಯು ಇಂತಹ ಸುಳ್ಳು ಹರಡಬಾರದು. ಬಿಜೆಪಿಯು ಅನೇಕ ರಾಜ್ಯಗಳಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿದೆ ಎಂದು ಅವರು ತಿರುಗೇಟು ನೀಡಿದರು.
ಈ ಸುದ್ದಿಯನ್ನೂ ಓದಿ | Lakshmi Hebbalkar: ಬಿಯರ್ ಗಿಯರ್ ಆಮೇಲೆ ಮಾತಾಡಿ, ಮಹಿಳೆಯರಿಗೆ ಗೌರವ ಕೊಡಿ; ಹೆಬ್ಬಾಳಕರ್ ಗರಂ
ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಗುರಿಯಾಗಿಟ್ಟುಕೊಂಡು ಈ ಹೇಳಿಕೆ ನೀಡಲಾಗಿದೆಯೇ ಎಂದು ಕೇಳಿದಾಗ, ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂಬುದು ಪ್ರಧಾನಿಯವರಿಗೆ ಅರಿವಾಗಿದೆ. ಆದ ಕಾರಣಕ್ಕೆ ಅನವಶ್ಯಕ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.