ಮಾನ್ವಿ : ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಮಿತಿಮೀರಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ಶುಕ್ರವಾರ ಮಾನ್ವಿ ತಾಲ್ಲೂಕು ಸೇರಿದಂತೆ ಜಿಲ್ಲೆಯ 7 ತಾಲ್ಲೂಕು ಅಧಿಕಾರಿ ಗಳ ಜೊತೆ ಮಹತ್ವದ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.
ಸಭೆಯಲ್ಲಿ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ್ ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ಸಮಾಜ ಕಲ್ಯಾಣ ಅಧಿಕಾರಿ ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಭದ್ರಾದೇವಿ, ಶಿಕ್ಷಣ ಇಲಾಖೆ ವೆಂಕಟೇಶ ಗುಡಾಳ, ಪೊಲೀಸ್ ಇಲಾಖೆ, ಪುರಸಭೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ಕೊರೊನಾ ವಾರಿಯರ್ಸ್ ಸಭೆಯಲ್ಲಿ ಉಪಸ್ಥಿತ ರಿದ್ದರು.
ಸಭೆಯಲ್ಲಿ ಕರೋನಾ ಮಹಾಮಾರಿ ವೈರಸ್ ಅನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿ ಈ ವೈರಸ್ ನಿಯಮಾವಳಿಗಳನ್ನು ಕಟ್ಟು ಬದ್ಧವಾಗಿ ಪಾಲಿಸಿ ಜನರಲ್ಲಿ ಅರಿವು ಮೂಡಿಸಿ ಜಿಲ್ಲೆಯನ್ನು ಕರೋನ ಮುಕ್ತವಾಗಿ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಲಹೆಗಳನ್ನು ನೀಡಿದರು.