ಮಂಗಳೂರು: ಬಾಲಕಿಮೇಲೆ ಸಾಮೂಹಿಕ ಅತ್ಯಾಚಾರವೆಸಗಿ (Physical abuse) ಹತ್ಯೆ (Murder Case) ಮಾಡಿದ್ದ ಮೂವರು ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್ಸ್ ಕೋರ್ಟ್ನಿಂದ ಗಲ್ಲು ಶಿಕ್ಷೆ (death penalty) ಪ್ರಕಟಿಸಲಾಗಿದೆ.
ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ತಿರ್ಕಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ನವೆಂಬರ್ 21ರಂದು ಅಕೃತ್ಯ ನಡೆದಿತ್ತು. ಮಂಗಳೂರು ಹೊರವಲಯದ ಪರಾರಿ ಹೆಂಚಿನ ರಾಜ್ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ಬಳಿಕ ಕೊಲೆ ಮಾಡಲಾಗಿತ್ತು. ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶದಿಂದ ಬಂದ ಕಾರ್ಮಿಕರಾದ ಇವರು, ಈ ಘೋರ ಕೃತ್ಯ ಎಸಗಿದ್ದರು. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎತ್ತಿನಹೊಳೆ ಕಾಮಗಾರಿ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು
ತಿಪಟೂರು: ಮನೆಯಿಂದ ಗುರುವಾರ ಸಂಜೆ ಕಾಣೆಯಾಗಿದ್ದ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ (Tiptur News) ತಿಪಟೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಹುಚ್ಚನಹಟ್ಟಿಯ ಮನೋಹರ್(8), ಯದುವೀರ್ (10) ಮೃತ ಮಕ್ಕಳು.
ಗುರುವಾರ ಮಕ್ಕಳು ಆಟವಾಡಲು ಹೋಗಿ ಕಾಣೆಯಾಗಿರುವ ಬಗ್ಗೆ ತಿಪಟೂರು ಗ್ರಾಮಾಂತರ ಠಾಣೆಗೆ ಪೋಷಕರು ದೂರು ನೀಡಿದ್ದರು. ಮಕ್ಕಳಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರಿಗೆ ಶುಕ್ರವಾರ ಬೆಳಗ್ಗೆ ಅದೇ ಗ್ರಾಮದ ಬಳಿ ಹಾದುಹೋಗಿರುವ ಎತ್ತಿನಹೊಳೆ ನಾಲೆಯ ಗುಂಡಿಯಲ್ಲಿ ಇಬ್ಬರು ಮಕ್ಕಳ ಶವ ಪತ್ತೆಯಾಗಿವೆ.
ನೀರಿನಲ್ಲಿ ಆಟವಾಡಲು ಹೋದ ವೇಳೆ ಮಕ್ಕಳು ಗುಂಡಿಗೆ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಮಕ್ಕಳ ಮೃತದೇಹ ಕಂಡು ಹೆತ್ತವರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಎತ್ತಿನಹೊಳೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ನಮ್ಮ ಮಕ್ಕಳ ಸಾವಿಗೆ ನ್ಯಾಯ ಬೇಕಿದೆ ಎಂದು ಪೋಷಕರು, ಮಕ್ಕಳ ಶವದ ಮುಂದೆ ಕುಳಿತು ಕಣ್ಣೀರಿಡುತ್ತಾ ಪ್ರತಿಭಟಿಸುತ್ತಿರುವ ದೃಶ್ಯ ಹೃದಯ ಕಲಕುವಂತಿದೆ.