Friday, 20th September 2024

ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ? ಬೇಡವೇ? ಇಂದು ನಿರ್ಧಾರ…

ಬೆಂಗಳೂರು: ಕರೋನಾ ಆತಂಕದ ನಡುವೆ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ಭಾನುವಾರ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಮಧ್ಯಾಹ್ನ 1 ಗಂಟೆಗೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮತ್ತೊಂದು ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಸೋಂಕು ಹೆಚ್ಚುತ್ತಿದ್ದು, ರಾಜ್ಯಕ್ಕೂ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮಗಳ ಅಗತ್ಯವಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಲ್ಲದೇ ಮೆರವಣಿಗೆಗೆ ಹಾಗೂ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು. ಕೇವಲ ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.