Saturday, 23rd November 2024

ಇಂದಿನಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ

ಧರ್ಮಸ್ಥಳ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಇಂದಿನಿಂದ ಆರಂಭಗೊಳ್ಳಲಿದೆ.

ಗುರುವಾರದಿಂದ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿ ಭವನಗಳು, ಉದ್ಯಾನ, ಪ್ರವೇಶ ದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸ ಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳವನ್ನು ಮದುವೆ ಮನೆಯಂತೆ ಸಿಂಗಾರಗೊಂಡಿದೆ. ರಾಜ್ಯದ ಮೂಲೆ ಮೂಲೆಯಿಂದ ಭಕ್ತರನ್ನು ಸೆಳೆಯುತ್ತಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಯುಟ್ಯೂಬ್ ಮತ್ತು ಫೇಸ್ ಬುಕ್ ‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರವಾಗಲಿದೆ. ಈ ಬಾರಿ ವಸ್ತುಪ್ರದರ್ಶನ ರದ್ದುಗೊಳಿಸ ಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದರು.

13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14 ರಂದು ನಡೆಯುವ ಸಾಹಿತ್ಯ ಸಮ್ಮೇಳನ ವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.