Sunday, 5th January 2025

Dharwad News: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಚಿವ ಸಂಪುಟ ಅನುಮೋದನೆ

Karnataka: Highlights of the cabinet meeting led by Karnataka Chief Minister Siddaramaiah

ಬೆಂಗಳೂರು: ಇದುವರೆಗೆ ಜೊತೆಯಾಗಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು (Municipality) ವಿಭಜಿಸಿ, ಧಾರವಾಡಕ್ಕೆ (Dharwad News) ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ (Cabinet meeting) ಅನುಮೋದನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1ರಿಂದ 26ವರೆಗಿನ ವಾರ್ಡ್‌ಗಳನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನುಳಿದ ವಾರ್ಡ್ ನಂ.27 ರಿಂದ 82 ರವರೆಗಿನ ಪ್ರದೇಶಗಳನ್ನು ಹುಬ್ಬಳ್ಳಿ ಮಹಾನಗರ ಪಾಲಿಕೆಯನ್ನಾಗಿ ಮುಂದುವರೆಸಲು ಅನುಮತಿ ನೀಡಲಾಗಿದೆ.

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದೆ. 2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನ ಆಗ್ರಹಿಸಿದ್ದರು. ಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು. ಹೀಗಾಗಿ, ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: Draupadi Murmu: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ನಿಮ್ಹಾನ್ಸ್‌ ಸುತ್ತಮುತ್ತ ಏರ್‌ಕ್ರಾಫ್ಟ್‌ ಹಾರಾಟ ನಿರ್ಬಂಧ