ಸೋಮವಾರ ಗುಂಡ್ಲುಪೇಟೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು. ಸೋಮವಾರ ರಾತ್ರಿಯಿಂದ ವಾಂತಿ ಭೇದಿ ಆಗಿ ಬೆಳಗ್ಗೆ ಮೃತ ಪಟ್ಟಿದೆ ಎಂದು ವರದಿ ಯಾಗಿದೆ.
ಬಂಡೀಪುರ ಸಫಾರಿ ಕೌಂಟರ್ ಸಮೀಪ ರಾಣಾ ಪಾರ್ಥಿವ ಶರೀರ ಇರಿಸಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಅಂತಿನ ದರ್ಶನದ ನಂತರ ಗೌರವ ಸಮರ್ಪಿಸಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಅರಣ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಪೊಲೀಸ್ 23ನೇ ಬೆಟಾಲಿಯನ್‌ನಲ್ಲಿ 9 ತಿಂಗಳು ತರಬೇತಿ ಪಡೆದು, 2014ರಲ್ಲಿ ಅರಣ್ಯ ಅಪರಾಧ ಪತ್ತೆಗಾಗಿ ಬಂಡೀಪುರಕ್ಕೆ ನಿಯೋಜನೆಗೊಂಡಿತ್ತು. ಹುಲಿ ಕೊಂದವರು, ಮರ ಕಡಿದವರು, ಹುಲಿ ಸೆರೆ ಕಾರ್ಯಾಚರಣೆ ಯಲ್ಲೂ ರಾಣಾ ಪರಾಕ್ರಮ ತೋರಿದ್ದ.