Sunday, 15th December 2024

Dinesh Gundurao: ಬ್ರಾಹ್ಮಣ ಸಾವರ್ಕರ್‌ ಮಾಂಸಾಹಾರ ಸೇವಿಸುತ್ತಿದ್ದ ಸಂಗತಿ ಹೊಸದೇನಲ್ಲ; ದಿನೇಶ್ ಗುಂಡೂರಾವ್ ಸಮರ್ಥನೆ

Covid Scam

ಬೆಂಗಳೂರು: ಗಾಂಧೀವಾದ ಹಾಗೂ ಸಾವರ್ಕರ್ ಅವರ ಮೂಲಭೂತ ವಾದದ ಬಗ್ಗೆ ವಿಶ್ಲೇಷಣೆ ಮಾಡಿದ್ದೇನೆಯೇ ಹೊರತು ಸಾವರ್ಕರ್ ಅವರ ಬಗ್ಗೆ ವೈಯಕ್ತಿಕ ಟೀಕೆ ಮಾಡುವ ಉದ್ದೇಶ ನನ್ನದಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಸ್ಪಷ್ಟನೆ ನೀಡಿದ್ದಾರೆ. ಸಾವರ್ಕರ್ ಮಾಂಸಹಾರಿಯಾಗಿದ್ದರು ಎಂಬ ತಮ್ಮ ಹೇಳಿಕೆ ವಿವಾದದ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸ್ಪಷ್ಟನೆ ನೀಡಿದ ಸಚಿವರು, ತಮ್ಮ ಹೇಳಿಕೆಯನ್ನ ತಪ್ಪಾಗಿ ಅರ್ಥೈಸುವುದು ಸರಿಯಲ್ಲ ಎಂದರು.

ಈ ಸುದ್ದಿಯನ್ನೂ ಓದಿ | Mysuru Dasara 2024: 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿದ್ದರಾಮಯ್ಯ

ಗಾಂಧೀಜಿಯವರು ಸಸ್ಯಹಾರಿಯಾಗಿದ್ದರು. ಹಿಂದು ಧರ್ಮ ಹಾಗೂ ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಅವರಿಗೆ ಅಪಾರವಾದ ನಂಬಿಕೆಯಿತ್ತು. ಆದರೆ ಸಾವರ್ಕರ್ ಅವರು ನಾಸ್ತಿಕರಾಗಿ ಹಿಂದು ರಾಷ್ಟ್ರ ಕಟ್ಟಲು ಹೊರಟಿದ್ದರು. ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಯಲ್ಲ. ಅದು ಯುರೋಪ್‌ನಿಂದ ಬಂದಿದ್ದು. ಅಲ್ಲದೇ ಸಾವರ್ಕರ್ ಮಾಂಸಹಾರಿಯಾಗಿದ್ದರು. ಗೋ ಹತ್ಯೆಯನ್ನು ಅವರು ವಿರೋಧಿಸಿರಲಿಲ್ಲ. ಒಂದು ರೀತಿ ಅವರು ಮಾಡರ್ನಿಸ್ಟ್ ಆಗಿ ಕಾಣಿಸಿಕೊಂಡರೂ, ಅವರ ಮೂಲಭೂತವಾದ ನಮ್ಮ ದೇಶದ ಪರಂಪರೆಗೆ ವಿರುದ್ಧವಾಗಿದೆ. ಹೀಗಾಗಿ ದೇಶದಲ್ಲಿ ಗಾಂಧೀವಾದ ಗೆಲ್ಲಬೇಕು ಎಂದು ಹೇಳಿಕೆ ನೀಡಿದ್ದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.

ಈ ಸುದ್ದಿಯನ್ನೂ ಓದಿ | Nadaprabhu Kempegowda: ಲಂಡನ್‌ನಲ್ಲಿ ಅದ್ಧೂರಿಯಾಗಿ ಜರುಗಿತು ಕೆಂಪೇಗೌಡರ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸಂಭ್ರಮ

ಸಾವರ್ಕರ್ ನಾಸ್ತಿಕರು, ಮಾಂಸಹಾರ ಸೇವನೆ ಮಾಡುತ್ತಿದ್ದರು ಎಂಬುದನ್ನು ಅವರೇ ಹಲವು ಪ್ರಸಂಗಗಳಲ್ಲಿ ಹೇಳಿಕೊಂಡಿದ್ದಾರೆ. ಇದನ್ನ ನಾನು ಹೊಸದಾಗಿ ಏನು ಹೇಳುತ್ತಿರುವುದಲ್ಲ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು ಇದ್ದವು. ಹಾಗೆ ನೋಡಿದರೆ ಗಾಂಧೀಜಿ ಸಂಪ್ರದಾಯಸ್ಥರು. ಹಿಂದು ಸಂಸ್ಕೃತಿ, ಧರ್ಮದ ಮೇಲೆ ಅಪಾರ ನಂಬಿಕೆಯಿಟ್ಟುಕೊಂಡಿದ್ದರು. ಆದರೆ ಗಾಂಧಿಜೀಯವರದ್ದು ಡೆಮಾಕ್ರೆಟಿಕ್ ವ್ಯಕ್ತಿತ್ವ. ಇತರ ಧರ್ಮಗಳನ್ನು ಅವರು ಗೌರವಿಸುತ್ತಿದ್ದರು. ಸಾವರ್ಕರ್ ಅವರದ್ದು ಮೂಲಭೂತವಾದ. ಹೀಗಾಗಿ ಸಂಪ್ರದಾಯಸ್ಥರೆಲ್ಲ ಮೂಲಭೂತವಾದಿಗಳಲ್ಲ. ಅವರಲ್ಲೂ ಅನೇಕರು ಪ್ರಜಾಪ್ರಭುತ್ವದ ಮನಸ್ಥಿತಿ ಉಳ್ಳವರಿದ್ದಾರೆ. ಹೀಗಾಗಿ ಗಾಂಧೀವಾದಕ್ಕೆ ನಾವು ಹೆಚ್ಚು ಮನ್ನಣೆ ನೀಡುವ ಮೂಲಕ ಮೂಲಭೂತವಾದದ ವಿರುದ್ಧ ಹೋರಾಟ ನಡೆಸುವ ಅಗತ್ಯತೆ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.