Saturday, 14th December 2024

ದೊಡ್ಡಣ್ಣೇಗೆರೆ ಪಿಡಿಓ ಅವರ ಕರ್ತವ್ಯಕ್ಕೆ ಅಡ್ಡಿ, ಜಾತಿನಿಂದನೆ: ದೂರು ದಾಖಲು

ಹಂದನಕೆರೆ ಪೊಲೀಸ್ ಠಾಣೆಯಲ್ಲಿ

ದೊಡ್ಡಣ್ಣೆಗರೆ: ಗ್ರಾಮ ಪಂಚಾಯತಿ ಪ್ರಭಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ, ಜಾತಿ ನಿಂದನೆ ಮಾಡುವವ ಮೂಲಕ ಮಾನ ಹಾನಿ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಹಸೀಲ್ದಾರ್ ತೇಜಸ್ವಿನಿ ಹಾಗೂ ತಾಲೂಕು ಪಂಚಾ ಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ ದೊಡ್ಡಣ್ಣೆಗರೆ ಗ್ರಾಮ ಪಂಚಾ ಯತಿಯಲ್ಲಿ (ಪ್ರಭಾರ) ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸು ತ್ತಿರುವ ಶ್ರೀ ಅಡವೀಶ್ ಕುಮಾರ್ ರವರ ಮೇಲೆ ಫೆ.24 ರಂದು ಸದರಿ ಪಂಚಾಯತಿ ಅಧ್ಯಕ್ಷ ಎ.ವೈ ರಮ್ಯರವರ ಪತಿಯಾದ ಮಂಜುನಾಥ್ ಹಾಗೂ ಗ್ರಾಮಪಂಚಾಯತಿ ಸದಸ್ಯರಾದ ಪ್ರಶಾಂತ್ ಡಿ.ಎಸ್ ಹಾಗೂ ಶಿವಕುಮಾರ್‌ ಡಿ.ಎಂ ರವರು ಗ್ರಾಮಪಂಚಾಯತಿ ಕಛೇರಿಗೆ ಬಂದು ಕರ್ತವ್ಯದ ಅವಧಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರನ್ನು ಕೊಠಡಿ ಯಿಂದ ಹೊರ ಹಾಕಿ ಸರ್ಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿ ಉಂಟು ಮಾಡಿರುತ್ತಾರೆ. ಆ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಇವರ ಮೇಲೆ ಜಾತಿ ನಿಂದನೆ ಮಾಡುವ ಮೂಲಕ ಮಾನಹಾನಿ ಮಾಡಿರುತ್ತಾರೆ. ಈ ಬಗ್ಗೆ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿರುತ್ತದೆ.

ಈ ಘಟನೆಯಿಂದಾಗಿ ತಾಲ್ಲೂಕಿನ ಗ್ರಾಮಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು /ಕಾರ್ಯದರ್ಶಿ ಹಾಗೂ ಗ್ರಾಮಪಂಚಾಯತಿ ಸಿಬ್ಬಂದಿಗಳು ಮಾನಸಿಕವಾಗಿ ಕುಗ್ಗಿದ್ದು, ಕಾನೂನು ರೀತಿಯಿಂದ ಕರ್ತವ್ಯ ನಿರ್ವಹಿಸಲು ಕಷ್ಟ ಸಾಧ್ಯವಾಗಿರುತ್ತದೆ.

ಆದ್ದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಗ್ರಾಮಪಂಚಾಯತಿ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ನೈತಿಕ ಬೆಂಬಲ ನೀಡಬೇಕಾಗಿ ತಾಲ್ಲೂಕಿನ ಎಲ್ಲಾ ಗ್ರಾಮಪಂಚಾಯತಿ ಸಿಬ್ಬಂದಿ ಪರ ವಾಗಿ ಪಿಡಿಒ ಕ್ಷೇಮಾ ಭಿವೃದ್ಧಿ ಸಂಘದ ಅಧ್ಯಕ್ಷ ರವಿ ಸಿ.ಆರ್, ಗೌರವಾಧ್ಯಕ್ಷರು ನಾಗೇಶ್, ಸಂಘಟನಾ ಕಾರ್ಯದರ್ಶಿ ರಮೇಶ್ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಓಗಳು ಒತ್ತಾಯಿಸಿದ್ದಾರೆ.