ಬೆಳಗಾವಿ: ಬಿಜೆಪಿ ಪಕ್ಷ (BJP Party) ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅವರು, ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು ಎಂದು ಅವರು ಕಿಡಿಕಾರಿದರು.
ಈ ಸುದ್ದಿಯನ್ನೂ ಓದಿ | DK Shivakumar: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ; ಡಿ.ಕೆ. ಶಿವಕುಮಾರ್ ಟೀಕೆ
ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, ʼಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.