Sunday, 15th December 2024

DK Shivakumar: ಎಚ್‌ಡಿಕೆ ರಾಜಕಾರಣ ಬಿಟ್ಟು ಉದ್ಯೋಗ ಸೃಷ್ಟಿ ಮಾಡಲಿ: ಡಿ.ಕೆ.ಶಿವಕುಮಾರ್ ಕಿಡಿ

DK Shivakumar

ಬೆಂಗಳೂರು: “ಕುಮಾರಸ್ವಾಮಿ ಅವರು ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳಿಂದ ಮಾಹಿತಿ ಸೋರಿಕೆಯಾಗುತ್ತಿದೆ. ನನಗೆ ಉತ್ತಮವಾಗಿ ಗುಪ್ತಚರ ಮಾಹಿತಿ ದೊರಕುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಡಿಸಿಎಂ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೆಯ ಅವಕಾಶ ಬಳಸಿಕೊಳ್ಳಲಿ” ಎಂದರು.

“ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರಗಿ ಸೇರಿ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ… ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ” ಎಂದು ವ್ಯಂಗ್ಯವಾಡಿದರು.

ರಾಜಕೀಯ ಬಿಟ್ಟು ಬೇರೆ ವಿಚಾರವಿಲ್ಲವೇ?

ನಿಮ್ಮ ಹಾಗೂ ಗೃಹ ಸಚಿವರಾದ ಪರಮೇಶ್ವರ್ ಅವರ ನಡುವೆ ರಾಜಕೀಯ ಚರ್ಚೆ ನಡೆಯಿತೇ ಎಂದು ಕೇಳಿದಾಗ, “ನಿಮಗೆ ರಾಜಕೀಯ ಬಿಟ್ಟು ಬೇರೆ ವಿಚಾರಗಳು ಕಾಣಿಸುವುದಿಲ್ಲವೇ?. ಜನರು ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಅಧಿಕಾರ ಕೊಟ್ಟಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸಬೇಕು” ಎಂದರು.

“ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ಧಿಯಿದ್ದರೇ ತಾನೇ ರಾಜಕೀಯ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ” ಎಂದರು.

ಅಧಿಕಾರಿಗಳು ಇಲ್ಲದೇ ಪರಮೇಶ್ವರ ಹಾಗೂ ನೀವು ಮಾತ್ರ ಒಟ್ಟಿಗೆ ಸೇರಿದ್ದೀರಿ ಎಂದು ಕೇಳಿದಾಗ, “ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ. ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ ” ಎಂದು ಹೇಳಿದರು.

ನನಗೂ ಅದಕ್ಕೂ ಸಂಬಂಧವಿಲ್ಲ

ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನೂ ಓದಿ | G Janardhan Reddy: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್‌; ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧ ತೆರವು

ಐಟಿಯಿಂದ ತನಿಖೆಯಾಗಲಿ

ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಡಲಾಗಿದೆ ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ನಮ್ಮ ಕಾನೂನು ಸಲಹೆಗಾರರ ಬಳಿ ಚರ್ಚೆ ನಡೆಸಲಾಗುವುದು. ಈ ಕೃತ್ಯ ಐಟಿಯವರಿಂದ ತನಿಖೆಗೆ ಒಳಗಾಗಬೇಕು” ಎಂದರು.