Thursday, 12th December 2024

ಆತ್ಮನಿರ್ಭರ ಭಾರತ ಕನಸು ನನಸು

ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಗೆ 14,778 ಕೋಟಿ ರು. ಪ್ರಕಟಿಸಲಾಗಿದ್ದು, ಇದರಿಂದ 58 ಕಿ.ಮೀ. ಹೊಸ ಮಾರ್ಗ ನಿರ್ಮಿಸಲು ಸಾಧ್ಯ ಇದು ಕರ್ನಾಟಕಕ್ಕೆ ನಮ್ಮವರೇ ಆದ ಅರ್ಥ ಸಚಿವರು ನೀಡಿರುವ ಕೊಡುಗೆ ರಾಷ್ಟ್ರೀಯ ರೈಲ್ವೆ ಯೋಜನೆಯಡಿ 1.10 ಲಕ್ಷ ಕೋಟಿ ರು. ಒದಗಿಸಿರುವುದು ಸ್ವಾಗತಾರ್ಹ.

ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಬಸವಳಿದಿರುವ ಭಾರತೀಯ ಅರ್ಥ ವ್ಯವಸ್ಥೆೆಯ ಪುನಶ್ಚೇತನಕ್ಕೆ ಈ ಬಜೆಟ್ ಸಂಜೀವಿನಿಯಾಗಿದ್ದು, ಕರೋನಾ ಕಾರಣದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಪುಟಿದೇಳಲು ಈ ಬಜೆಟ್ ವೇಗವರ್ಧಕವಾಗಿ ಕೆಲಸ ಮಾಡಲಿದೆ.

ಆರೋಗ್ಯ ವಲಯಕ್ಕೆೆ ಹೆಚ್ಚಿನ ಕೊಡುಗೆ ನೀಡಿರುವುದು ಮತ್ತು ಆತ್ಮನಿರ್ಭರ ಭಾರತ ನನಸಾಗಿಸುವ ನಿಟ್ಟಿನಲ್ಲಿ 13 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿರುವುದು ಮೆಚ್ಚುವಂತಹದ್ದು. ಸಾಂಕ್ರಾಮಿಕದ ಸಂಕಷ್ಟದ ನಡುವೆ ಇದಕ್ಕಿಂತ ಉತ್ತಮ ಬಜೆಟ್
ನಿರೀಕ್ಷಿಸುವುದು ಅಸಾಧ್ಯ. ರೋಗ ನಿಯಂತ್ರಣದ ಜತೆಗೆ ಅರ್ಥ ವ್ಯವಸ್ಥೆಯ ಪುನರುಜ್ಜೀವನಕ್ಕೆ ಅಗತ್ಯವಾದ ಕಾರ್ಯತಂತ್ರವನ್ನು ಕೇಂದ್ರ ವಿತ್ತ ಸಚಿವರು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಕರೋನಾ ಲಸಿಕೆಗೆ 35,000 ಕೋಟಿ ರು. ಒದಗಿಸಿದ್ದು, ಇನ್ನೂ ಹೆಚ್ಚಿನ ಹಣದ ಅಗತ್ಯ ಬಿದ್ದಲ್ಲಿ ಒದಗಿಸುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿರುವುದು ಸ್ವಾಗತಾರ್ಹ. 75 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯಿಂದ
ವಿನಾಯಿತಿ ನೀಡಿರುವುದು ಶ್ಲಾಘನೀಯ. ಒಟ್ಟಿನಲ್ಲಿ ಈ ಬಜೆಟ್ ಅರ್ಥ ವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆ ಗಳ ಅನುಷ್ಠಾನಕ್ಕೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಪ್ರದರ್ಶಿಸಿದೆ.

ಎಪಿಎಂಸಿ ಹಾಗೂ ಎಂಎಸ್‌ಪಿ ವ್ಯವಸ್ಥೆ ಮುಂದುವರಿಕೆ ಮತ್ತು ಬಲವರ್ಧನೆಗೆ ಒತ್ತು ನೀಡಲಾಗಿದೆ. ಕೃಷಿ ಮಾರುಕಟ್ಟೆಗಳಿಗೆ
ಮೂಲಭೂತ ಸೌಕರ್ಯಗಳಿಗಾಗಿ ನಿಧಿ, ಸೂಕ್ಷ್ಮ ನೀರಾವರಿ ಯೋಜನೆಯ ಅನುದಾನವನ್ನು 2 ಪಟ್ಟು ಮಾಡಲಾಗಿದೆ. 22 ಬೆಳೆ ಗಳಿಗೆ ಮೌಲ್ಯವರ್ಧನೆ ಯೋಜನೆ ಘೋಷಿಸಿದ್ದು, ರೈತರಿಗೆ ಸಾಕಷ್ಟು ನೆರವಾಗಲಿದೆ. ಮಿತವೆಚ್ಚದ ಮನೆಗಳ ನಿರ್ಮಾಣ ಮಾಡು ವವರಿಗೆ ತೆರಿಗೆ ರಜೆ ನೀಡಿರುವುದು ಸ್ವಾಗತಾರ್ಹ.

ರಾಷ್ಟ್ರದ ರಸ್ತೆ ಸಂಪರ್ಕ ಜಾಲ ಸುಧಾರಿಸಲು ಭಾರತ ಮಾಲಾ ಯೋಜನೆಯಡಿಯಲ್ಲಿ 3.30 ಲಕ್ಷ ಕೋಟಿ ರು. ಹಾಗೂ ವಿದ್ಯುತ್ ವಲಯಕ್ಕೆ 3 ಲಕ್ಷ ಕೋಟಿ ರು. ಒದಗಿಸಿರುವುದು ಪ್ರಶಂಸನೀಯ. ಸಾರ್ವಜನಿಕ ಬಸ್ ಸಾರಿಗೆ ವ್ಯವಸ್ಥೆಗೆ 18 ಸಾವಿರ ಕೋಟಿ ರು. ಗಳನ್ನು ಮೀಸಲಿಟ್ಟಿರುವುದು ನಗರ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಕಡಿತಗೊಳಿಸಲು ಸಹಕಾರಿಯಾಗಿದೆ.

ಕೃಷಿ ಕ್ಷೇತ್ರದ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ಬೆಳವಣಿಗೆಗೆ ಈ ಬಜೆಟ್‌ನಲ್ಲಿ ವಿಶೇಷ ಗಮನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2022 ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಈ ಬಜೆಟ್ ಭೂಮಿಕೆ ಒದಗಿಸಿದೆ. ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ 16.50 ಲಕ್ಷ ಕೋಟಿ ರು. ನಿಗದಿ ಮಾಡಿದ್ದು ಸ್ವಾಗತಾರ್ಹ.