Thursday, 12th December 2024

ಶಿಕ್ಷಣ ಸಚಿವ, ಇಲಾಖೆ ಆಯುಕ್ತರು ಆಸ್ಪತ್ರೆಗೆ ದಾಖಲು

ಬೆಂಗಳೂರು: ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಶನಿವಾರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇತ್ತೀಚೆಗಷ್ಟೇ ಕರೊನಾ ಸೋಂಕು ದೃಢಪಟ್ಟು, ಇಷ್ಟು ದಿನ ಹೋಂ ಕ್ವಾರಂಟೈನ್‌ನಲ್ಲಿದ್ದರು.

ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಬೇಕೆಂಬ ಒತ್ತಾಯ ಹೆಚ್ಚಾಗಿದ್ದ ಕಾರಣ, ಶನಿವಾರ ಮಧ್ಯಾಹ್ನವಷ್ಟೇ ಸಚಿವರು ಆ ಯೋಜನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುತ್ತಿರುವುದಾಗಿ ಘೋಷಿಸಿದ್ದರು. ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತ ಅನ್ಬುಕುಮಾರ್ ಕೂಡ ಕರೊನಾ ದೃಢ ಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜ ನಗರ ಪ್ರವಾಸ ಮುಗಿಸಿದ ಬಳಿಕ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನೆಲೆ ಯಲ್ಲಿ ಪ್ರವಾಸ ಮೊಟಕುಗೊಳಿಸಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.